ಗೌರಿ ಗಣೇಶ ಹಬ್ಬ:ಪುನೀತ್ ಚತುರ್ಥಿ ಆಚರಣೆ

ಗೌರಿ ಗಣೇಶ ಹಬ್ಬ: ಮಾರುಕಟ್ಟೆಯಲ್ಲಿ ವ್ಯಾಪಾರ ಭರಾಟೆ, ತರಹೇವಾರಿ ಮೂರ್ತಿಗಳು, ಪುನೀತ್ ಚತುರ್ಥಿ ಆಚರಣೆ

ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು.

Puneet Rajkumar idol

ಬೆಂಗಳೂರು: ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು.

ನಗರದ ಕೆ ಆರ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು, ಜನಜಂಗುಳಿಯಿಂದ ತುಂಬಿಹೋಗಿತ್ತು. ಮಾರುಕಟ್ಟೆಯಲ್ಲಿ ಪೂಜೆ ಸಾಮಗ್ರಿಗಳು, ಗೌರಿ , ಗಣೇಶ ಮೂರ್ತಿಗಳನ್ನು ಖರೀದಿಸಲು ಜನ ಆಗಮಿಸಿದ್ದರು. ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ತಾಲೂಕು ಕೇಂದ್ರ, ಹೋಬಳಿಗಳಲ್ಲಿ ವಿಗ್ರಹಗಳನ್ನು ಮಾರಾಟ ಮಾಡಲು ಸಾಕಷ್ಟು ಮಳಿಗೆಗಳನ್ನು ನಿರ್ಮಿಸಲಾಗಿದೆ. ಬಗೆ ಬಗೆಯ ಮೂರ್ತಿಗಳು ಈ ಬಾರಿ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. 50 ರೂಪಾಯಿಯಿಂದ ಹಿಡಿದು 10 ಸಾವಿರ ರೂ.ವರೆಗಿನ ವಿಗ್ರಹಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.

100%
ಗೌರಿ ಗಣೇಶ ಹಬ್ಬದ ಪ್ರಯುಕ್ತ ವ್ಯಾಪಾರ ಭರಾಟೆಯಲ್ಲಿ ತೊಡಗಿರುವ ಜನತೆ

ಇನ್ನು ಹಣ್ಣು, ಹೂವು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯು ಹೆಚ್ಚಾಗಿದೆ. ಆದರೂ ಅದನ್ನು ಲೆಕ್ಕಿಸದೇ ಹಬ್ಬದ ಗುಂಗಿನಲ್ಲಿ ಜನತೆ ಖರೀದಿಯಲ್ಲಿ ತೊಡಗಿದ್ದಾರೆ. 

ಮಾರುಕಟ್ಟೆಯಲ್ಲಿ ತರಹೇವಾರಿ ಗಣೇಶ ಮೂರ್ತಿ ರಾರಾಜಿಸುತ್ತಿದ್ದು, ಗೌರಿ, ಗಣೇಶನನ್ನು ಖರೀದಿಸಲು ಸಾಕಷ್ಟು ಸಂಖ್ಯೆಯಲ್ಲಿ ಜನತೆ ಆಗಮಿಸುತ್ತಿದ್ದಾರೆ.

100%
ಮಾರುಕಟ್ಟೆಯಲ್ಲಿ ಪುನೀತ್ ರಾಜ್‌ಕುಮಾರ್ ಮೂರ್ತಿಗೆ ಭಾರಿ ಬೇಡಿಕೆ

ಮಳೆಯನ್ನೂ ಲೆಕ್ಕಿಸದೆ ಬಡಾವಣೆಗಳಲ್ಲಿ, ಗಣಪತಿ ಮಂಡಳಿಗಳು ಗಣೇಶನನ್ನು ಪ್ರತಿಷ್ಠಾಪಿಸಲು ಉತ್ಸುಕತೆ ತೋರಿವೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌ನಿಂದ ಗೌರಿ, ಗಣೇಶ ಹಬ್ಬ ಕಳೆಗಟ್ಟಿರಲಿಲ್ಲ. ಆದರೆ, ಈ ಬಾರಿ ಕೋವಿಡ್‌ ಪರಿಣಾಮಕಾರಿಯಾಗಿಲ್ಲದ ಕಾರಣ ಜನತೆ ಅಮ್ಮ, ಮಗನ ಹಬ್ಬವನ್ನು ಅದ್ದೂರಿ ರೀತಿಯಲ್ಲಿ ಆಚರಿಸುತ್ತಿದ್ದಾರೆ.

100%
ಮೈಸೂರು ಅರಮನೆ ಮುಂದೆ ಯೋಗನಿರತ ಪ್ರಧಾನಿ ನರೇಂದ್ರ ಮೋದಿಯವರ ಮೂರ್ತಿ

ಅಪ್ಪು ಚತುರ್ಥಿ: ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹಠಾತ್ ಗತಿಸಿ ಹೋಗಿ 10 ತಿಂಗಳಾಗುತ್ತಿದೆ. ಮಾರುಕಟ್ಟೆಯಲ್ಲಿ ಗಣೇಶನ ಮೂರ್ತಿ ಜೊತೆಗೆ ಅಪ್ಪು ಮೂರ್ತಿಗಳನ್ನು ಕಲಾವಿದರು ನಿರ್ಮಿಸಿ ಇಟ್ಟಿದ್ದು ಜನರು ಅಪ್ಪು ಮೂರ್ತಿಗಳನ್ನು ಖರೀದಿಸಿ ಮನೆಗಳಲ್ಲಿ, ಬಡಾವಣೆಗಳಲ್ಲಿ ಅಪ್ಪು ಚತುರ್ಥಿ ಎಂದು ಆಚರಿಸುತ್ತಿರುವುದು ವಿಶೇಷವಾಗಿದೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *