ಯಮನಂತೆ ಬಂದ ಕಾರು: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು!

ಗೋವಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದೇವರ ದರ್ಶನಕ್ಕೆ ಬಂದು ವಾಪಸಾಗುತ್ತಿದ್ದ ಕಾರವಾರ ಕುಟುಂಬದ ಸದಸ್ಯರು ಮೃತಪಟ್ಟಿದ್ದಾರೆ.

ವಾಸ್ಕೋ/ಕಾರವಾರ: ದೇವರ ದರ್ಶನ ಮುಗಿಸಿ ವಾಪಸ್​ ಆಗುತ್ತಿದ್ದ ಕಾರೊಂದು ಭೀಕರ ಅಪಘಾತಗೊಂಡು ಕಾರವಾರ ಕುಟುಂಬದ ಸದಸ್ಯರು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಗೋವಾದ ವಾಸ್ಕೋದಲ್ಲಿ ಸಂಭವಿಸಿದೆ.

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮೃತರು ಕಾರವಾರ ತಾಲೂಕಿನ ಮಾಜಾಳಿ ಮೂಲದವರಾಗಿದ್ದು, ಉಲ್ಲಾಸ್ ನಾಗೇಕರ್​​ ಕುಟುಂಬ ಸದ್ಯ ವಾಸ್ಕೋ ನಿವಾಸಿಗಳಾಗಿದ್ದಾರೆ. ಉಲ್ಲಾಸ್ ಸೇರಿದಂತೆ ಅವರ ಕುಟುಂಬದ ಒಟ್ಟು ಎಂಟು ಸದಸ್ಯರು ಕಾರಿನಲ್ಲಿ ವಾಸ್ಕೋದಿಂದ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯ ದರ್ಶನಕ್ಕೆ ಬಂದಿದ್ದರು. ದೇವಿ ದರ್ಶನ ಪಡೆದು ಬಳಿಕ ವಾಸ್ಕೋಗೆ ವಾಪಸ್​ ತೆರಳುತ್ತಿದ್ದರು. ಈ ವೇಳೆ ಗೋವಾದ ಕಾಣಕೋಣದ ಮನೋಹರ್ ಪರಿಕ್ಕರ್ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್​ನಲ್ಲಿ ಭೀಕರ ಅಪಘಾತ ಸಂಭವಿಸಿದೆ.

Karwar family killed in road accident  road accident at Goa  Accident in Manohar Parrikar national highway  ಭೀಕರ ರಸ್ತೆ ಅಪಘಾತ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು  ಗೋವಾದಲ್ಲಿ ಭೀರಕ ರಸ್ತೆ ಅಪಘಾತ  ಕಾರವಾರ ಕುಟುಂಬದ ಸದಸ್ಯರು ಮೃತ  ಅಪಘಾತದಲ್ಲಿ ಹಲವು ಮಂದಿ ಗಾಯ  ಸಾತೇರಿ ದೇವಿಯ ದರ್ಶನ

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಡ್ಗಾಂವ್​ನಿಂದ ಅತಿವೇಗದಲ್ಲಿ ಬಂದ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದು ಬಲ ಭಾಗದಲ್ಲಿ ಬರುತ್ತಿದ್ದ ಉಲ್ಲಾಸ್ ಅವರ ಕುಟುಂಬವಿದ್ದ ಕಾರಿಗೆ ಎದುರಿನಿಂದ ಗುದ್ದಿದೆ. ಅಷ್ಟೇ ಅಲ್ಲದೇ, ಅಲ್ಲೇ ಚಲಿಸುತ್ತಿದ್ದ ಸ್ಕೂಟರ್​ವೊಂದಕ್ಕೂ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ಉಲ್ಲಾಸ ನಾಗೇಕರ್, ಅವರ ಪತ್ನಿ ವೀಣಾ ನಾಗೇಕರ್ ಹಾಗೂ ಅವರ ಪುತ್ರ ಹರೀಶ್ ನಾಗೇಕರ್ ಮೃತಪಟ್ಟಿದ್ದು, ಉಳಿದ ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಮತ್ತು ಸ್ಕೂಟರ್​ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *