ಅಡಕೆ ಕೊಳೆ ರೋಗ : ಮರೀಚಿಕೆಯಾಗಿದೆ ಪರಿಹಾರ

nut-blight-disease-at-uttharakannada

ಉತ್ತರ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಕೊಳೆರೋಗಕ್ಕೆ ತುತ್ತಾಗಿರುವ ಸಾವಿರಾರು ಹೆಕ್ಟೇರ್ ಪ್ರದೇಶದ ಅಡಕೆ ಬೆಳೆಗೆ ಸರ್ಕಾರದ ಪರಿಹಾರ ಮಾತ್ರ ಮರೀಚಿಕೆಯಾಗಿದೆ.

ಶಿರಸಿ (ಉತ್ತರಕನ್ನಡ) : ಅತಿಯಾದ ಮಳೆ, ಆಗಾಗ ಬಂದು ಹೋಗುವ ಬಿಸಿಲು ಮಲೆನಾಡಿನ ಪ್ರಮುಖ ಬೆಳೆ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಅಡಕೆ ಬೆಳೆ ಹಾನಿಗೆ ಅಲ್ಪ ಮೊತ್ತದ ವಿಮೆ ಸೌಲಭ್ಯ ಬಿಟ್ಟರೆ ಹಾನಿಗೀಡಾಗುವ ಬೆಳೆಗೆ ಪರಿಹಾರ ನೀಡಲು ಸರ್ಕಾರದಿಂದ ಸ್ಪಷ್ಟ ಮಾರ್ಗಸೂಚಿ ಇಲ್ಲ. ಕಾರಣ ಕೊಳೆರೋಗ ಪರಿಹಾರ ಎನ್ನುವುದು ಕೃಷಿಕರಿಗೆ ಮರೀಚಿ ಕೆಯಾಗಿದೆ.

ಪ್ರತಿ ವರ್ಷ ಸಾವಿರಾರು ಹೆಕ್ಟೇರ್ ಅಡಕೆ ಬೆಳೆ ಕೊಳೆ ರೋಗದಿಂದ ನಾಶವಾಗುತ್ತದೆ. ಆದರೆ, ಅದಕ್ಕೆ ಪರಿಹಾರ ನೀಡಲು ಸರ್ಕಾರದ ಕಾನೂನಡಿ ಅವಕಾಶವಿಲ್ಲ. ಈ ಬಗ್ಗೆ ಪ್ರತಿ ವರ್ಷ ತೋಟಗಾರಿಕಾ ಇಲಾಖೆಗೆ ಪ್ರಸ್ತಾವನೆ ಕಳುಹಿಸಿದರೂ, ಪರಿಹಾರ ಬರುವ ಭರವಸೆಯೇ ಇಲ್ಲದಂತಾಗಿದೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಿಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ 32 ಸಾವಿರ ಹೆಕ್ಟೇರ್ ಅಡಕೆ ಪ್ರದೇಶವಿದೆ. ಅಂದಾಜು 3,900 ಹೆಕ್ಟೇರ್ ಪ್ರದೇಶದಷ್ಟು ಹಾನಿಯಾಗಿದೆ. ಅತಿವೃಷ್ಟಿ ಕಾರಣಕ್ಕೆ ಉಂಟಾದ ಕೊಳೆರೋಗಕ್ಕೆ ಪರಿಹಾರ ನೀಡಲು ಸರ್ಕಾರದ ನಿಯಮದಲ್ಲಿ ಅವಕಾಶ ಇಲ್ಲ.ಇದಕ್ಕಾಗಿಯೇ ಪ್ರತ್ಯೇಕ ಸಹಾಯಧನ ಘೋಷಣೆ ಆಗಬೇಕಿರುವ ಕಾರಣ ಪರಿಹಾರ ಸಿಗುವುದು ಕಷ್ಟವಾಗಿದೆ.

ಇನ್ನು ಈ ಕೊಳೆರೋಗ ಪರಿಹಾರ ಎನ್ನುವುದು ಸಿದ್ಧರಾಮಯ್ಯ ಸರ್ಕಾರದಲ್ಲಿ ಮಾತ್ರ ನೀಡಲಾಗಿತ್ತು‌.ಈ ಬಾರಿ ಅಡಕೆ ಕೊಳೆರೋಗಕ್ಕೆ ವಿಶೇಷ ಪರಿಹಾರ ನೀಡಲು ಸರ್ಕಾರ ನಿರ್ಣಯಿಸಬೇಕು. ಇದಲ್ಲದೇ ಹಾನಿಗೆ ಒಳಗಾದ ಭತ್ತ, ಜೋಳಕ್ಕೂ ಪರಿಹಾರ ಒದಗಿಸುವ ಕೆಲಸ ಆಗಬೇಕಿದೆ. ನೇರವಾಗಿ ಅತಿವೃಷ್ಟಿ ಹಾನಿ ಅಲ್ಲದೇ ಹೋದರೂ ಅಡಕೆ ಕೊಳೆ ಎಂಬುದು ಅತಿಯಾದ ಮಳೆಯಿಂದಲೇ ಬರುವ ರೋಗವಾಗಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎನ್ನುವುದು ರೈತರ ಆಗ್ರಹವಾಗಿದೆ.

ಒಟ್ಟಾರೆಯಾಗಿ ಪ್ರತಿ ವರ್ಷದಂತೆ ಈ ವರ್ಷವೂ ತೋಟಗಾರಿಕಾ ಇಲಾಖೆಯಿಂದ ಕೊಳೆ ರೋಗದ ಮಾಹಿತಿ ಜಿಲ್ಲಾಡಳಿತಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಅದು ಸರ್ಕಾರಕ್ಕೆ ತಲುಪುತ್ತದೆ. ಆದರೆ, ಅಡಕೆ ಬೆಳೆಗಾರರೇ ಹೆಚ್ಚಿರುವ ಜಿಲ್ಲೆಗೆ ಮಾತ್ರ ಸರ್ಕಾರದ ಪರಿಹಾರ ಇಲ್ಲವಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *