ಭಟ್ಕಳದ ವಿವಿಧೆಡೆ 10 ಪೊಲೀಸ್ ತಂಡಗಳ ಶೋಧ ಕಾರ್ಯ.. ಐವರು ಆರೋಪಿಗಳ ಬಂಧನ

Thumbnail image

ಅಕ್ರಮ ಜಾನುವಾರು ಸಾಗಾಟ, ಗಾಂಜಾ ಮಾರಾಟ ಹಾಗೂ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿಗಳ ಸಹಚರರ ಮನೆಗಳಲ್ಲಿ 50 ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯ 10 ತಂಡ ಭಟ್ಕಳದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಭಟ್ಕಳ: ಬೆಳ್ಳಂಬೆಳಗ್ಗೆ ಸುಮಾರು 50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ 10 ತಂಡ ಭಟ್ಕಳದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ, ವಿವಿಧ ಪ್ರಕರಣಗಳ ಆರೋಪಿಗಳು ಹಾಗೂ ಅವರ ಸಹಚರರ ಮನೆಗಳಲ್ಲಿ ತಪಾಸಣೆ ಕೈಗೊಂಡಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಸುಮನಾ ಪೆನ್ನೇಕರ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್ ಬದ್ರಿನಾಥ್ ಅವರ ಮಾರ್ಗದರ್ಶನದಲ್ಲಿ ಭಟ್ಕಳ ಡಿವೈಎಸ್‌ಪಿ ಕೆ. ಯು ಬೆಳ್ಳಿಯಪ್ಪ ನೇತೃತ್ವದಲ್ಲಿ ಭಟ್ಕಳ ನಗರ ಪೊಲೀಸ್ ಇನ್ಸ್​ಪೆಕ್ಟರ್​ ದಿವಾಕರ ಪಿ. ಎಂ ಭಟ್ಕಳ ಗ್ರಾಮಾಂತರ ಸಿಪಿಐ ಮಹಾಬಲೇಶ್ವರ ನಾಯ್ಕ ಹಾಗೂ ಇತರ ಉಪವಿಭಾಗದ 10 ಪೊಲೀಸ್ ಅಧಿಕಾರಿಗಳು, 40 ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ 10 ತಂಡವನ್ನು ರಚಿಸಲಾಗಿತ್ತು.

ಈ ತಂಡ ಬೆಳ್ಳಂಬೆಳಗ್ಗೆ ವಿವಿಧ ಗಂಭೀರ ಅಪರಾಧ ಪ್ರಕರಣಗಳಲ್ಲಿ ಬಂಧಿತರಾಗಿದ್ದವರು. ಅಕ್ರಮ ಜಾನುವಾರು ಸಾಗಣೆ, ಗಾಂಜಾ ಮಾರಾಟ, ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿಗಳ ಸಹಚರರ ಮನೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಭಟ್ಕಳ ನಗರ ಪೊಲೀಸ್ ಠಾಣೆ, ಭಟ್ಕಳ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಣೆ, ಗಾಂಜಾ ಮಾರಾಟ, ಮನೆಗಳ್ಳತನ, ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣ ಹಾಗೂ ಉಡುಪಿ ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಭಟ್ಕಳ ಗುಳ್ಮಿಯ ಅಕ್ರಮ್ ಸಯ್ಯದ್ ಹಾಗೂ ಭಟ್ಕಳ ನಗರ ಮತ್ತು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿನ ಅಕ್ರಮ ಜಾನುವಾರು ಸಾಗಣೆ, ಗಾಂಜಾ ಮಾರಾಟ ಪ್ರಕರಣದ ಆರೋಪಿ ಮೊಹಮ್ಮದ್ ಇಮ್ರಾನ್‌ನನ್ನ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *