ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ

Thumbnail image

ರಾಜಕೀಯ ಧ್ರುವೀಕರಣದಲ್ಲಿ ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಲೇ ಹಾಲಿ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿ ಎಸ್ ಪಾಟೀಲ್, ಹೊಸ ಮುಖ ಪ್ರಶಾಂತ ದೇಶಪಾಂಡೆ ನಡುವೆ ಪೈಪೋಟಿ ಏರ್ಪಟ್ಟಿದೆ.

ಶಿರಸಿ (ಉತ್ತರ ಕನ್ನಡ): ಜಿಲ್ಲೆಯ ಯಲ್ಲಾಪುರ ಈಗ ರಾಜಕೀಯ ಧ್ರುವೀಕರಣಕ್ಕೆ ಹೆಸರಾಗುತ್ತಿದೆ. ಇಷ್ಟು ದಿನ ಬಿಜೆಪಿಯ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ವಿಎಸ್​ ಪಾಟೀಲ್ ಈಗ ಕಾಂಗ್ರೆಸ್​ನತ್ತ ವಾಲಿದ್ದಾರೆ. ಆದರೆ, ಈಗಾಗಲೇ ಅಲ್ಲಿ ಕಾಂಗ್ರೆಸ್​ನಿಂದ ಪ್ರಶಾಂತ ದೇಶಪಾಂಡೆ ಓಡಾಟ ನಡೆಸಿದ್ದಾರೆ. ಇದೆಲ್ಲದರ ಜೊತೆಯಲ್ಲಿ ಸಚಿವ ಹೆಬ್ಬಾರ್ ಅವರ ಕ್ಷೇತ್ರ ಓಡಾಟ ಭರ್ಜರಿಯಾಗಿ ನಡೆದಿದ್ದು, ಯಾರು ಯಾವ ಪಕ್ಷದ ಅಭ್ಯರ್ಥಿಯೋ ಎಂಬ ಜಿಜ್ಞಾಸೆಯ ನಡುವೆಯೇ, ಯಾರಿಗೆ ಮತ ನೀಡುವುದು ಎಂಬ ಗೊಂದಲವೂ ಮೂಡಿದೆ.

2008ರಲ್ಲಿ ಬಿಜೆಪಿಯಿಂದ ಶಾಸಕರಾಗಿದ್ದ ವಿಎಸ್​ ಪಾಟೀಲ್, ನಂತರದ ಚುನಾವಣೆಗಳಲ್ಲಿ ಸೋಲು ಕಂಡಿದ್ದರು. ಆದರೆ, ಈ ಬಾರಿ ಬಿಜೆಪಿ ಸರ್ಕಾರದ ಬಂದ ನಂತರದಲ್ಲಿ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಈಗ ಅದರ ನಾಮ ನಿರ್ದೇಶನ ರದ್ದು ಮಾಡಲಾಗಿದ್ದು, ಪರೋಕ್ಷವಾಗಿ ಬಿಜೆಪಿಯಿಂದ ಹೊರ ದಬ್ಬಿಂತಾಗಿದೆ.

ಹೀಗಾಗಿಯೇ ವಿಎಸ್‌‌ ಪಾಟೀಲ್ ಕಾಂಗ್ರೆಸ್ ಸೇರುವ ಮೂಲಕ ಹೊಸ ಸಂಚಲನ ಮೂಡಿಸಿದರೂ ಸಹ ಈ ಹಿಂದೆ ಭರ್ಜರಿ ಓಡಾಟ ನಡೆಸಿರುವ ಪ್ರಶಾಂತ ದೇಶಪಾಂಡೆ ಏನು ಮಾಡಲಿದ್ದಾರೆ? ಎಂಬ ಗೊಂದಲ ಕಾರ್ಯಕರ್ತರಲ್ಲಿ ಮೂಡಿದೆ. ಹಿರಿಯ ಕಾಂಗ್ರೆಸ್ಸಿಗ ಆರ್​ವಿ‌ ದೇಶಪಾಂಡೆ ಮಗ ಪ್ರಶಾಂತ ದೇಶಪಾಂಡೆ ಯಲ್ಲಾಪುರ ಕ್ಷೇತ್ರದ ಅಭ್ಯರ್ಥಿಯಾಗಲು ಕಳೆದ ಕೆಲ ತಿಂಗಳಿನಿಂದ ಕ್ಷೇತ್ರದಲ್ಲಿ ಓಡಾಟ ನಡೆಸುತ್ತಿದ್ದರು. ಕಾರ್ಯಕರ್ತರ ಪಡೆ ಕಟ್ಟಿಕೊಂಡು ವರ್ಷದ ಮೊದಲೇ ಪ್ರಚಾರ ರೀತಿಯ ಸಭೆಗಳನ್ನು ನಡೆಸುತ್ತಿದ್ದಾರೆ.

ರಾಜಕೀಯ ಧ್ರುವೀಕರಣದಲ್ಲಿ ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ

ಪು‌ನಃ ಪಾಟೀಲ್ ಮತ್ತು ಹೆಬ್ಬಾರ್ ವಾರ್?​: ಈ ಹಿಂದೆ ಮೂರ್ನಾಲ್ಕು ಚುನಾವಣೆಯಲ್ಲಿ ಪಾಟೀಲ್ ಮತ್ತು ಹಾಲಿ ಶಾಸಕ ಶಿವರಾಮ ಹೆಬ್ಬಾರ್ ನೇರ ಎದುರಾಳಿ ಆಗಿದ್ದರು. ಆಗ ಹೆಬ್ಬಾರ್ ಕಾಂಗ್ರೆಸ್​ನಲ್ಲಿದ್ದರೆ ಪಾಟೀಲ್ ಬಿಜೆಪಿಯಲ್ಲಿದ್ದರು. ಈಗ ಪು‌ನಃ ಪಾಟೀಲ್ ಮತ್ತು ಹೆಬ್ಬಾರ್ ನಡುವೆ ವಾರ್ ನಡೆಯುವ ಸಾಧ್ಯತೆಯಿದೆ. ಕಾರಣ ಸಚಿವ ಹೆಬ್ಬಾರ್ ಸಹ ಚುನಾವಣಾ ಕಣಕ್ಕೆ ಇಳಿದಿದ್ದಾರೆ.

ಇದರೊಟ್ಟಿಗೆ ಅವರು ಅವರದ್ದೆ ಆದ ಕಾರ್ಯಕರ್ತರ ಪಡೆಯನ್ನೂ ಹೊಂದಿದ್ದಾರೆ. ಆದರೆ, ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಯಾರು ಎಂಬುದು ಸ್ಪಷ್ಟವಾಗಲು ಚುನಾವಣೆ ಬರಬೇಕಾದ ಕಾರಣ ವೈಯಕ್ತಿಕ ಪ್ರಚಾರ ಸಾಗಿದೆ. ಅಲ್ಲದೇ ವಿಎಸ್​ ಪಾಟೀಲ್ ಅಧಿಕೃತವಾಗಿ ಕಾಂಗ್ರೆಸ್ ಸೇರದಿರುವುದು ಹಲವು ಗೊಂದಲ ಸೃಷ್ಟಿಯಾಗಿದೆ. ಆದ್ದರಿಂದ ಯಾವುದನ್ನೂ ಈಗಲೇ ಹೇಳಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಹೆಬ್ಬಾರ್ ಅವರದ್ದಾಗಿದೆ.

ಒಟ್ಟಾರೆಯಾಗಿ ಹಾಲಿ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿಎಸ್ ಪಾಟೀಲ್, ಹೊಸ ಮುಖ ಪ್ರಶಾಂತ ದೇಶಪಾಂಡೆ ಅವರು ನಡುವೆ ಮತದಾರ ಗೊಂದಲದಲ್ಲಿದ್ದಾನೆ. ನಾಯಕರ ನಡುವೆಯೂ ಯಾರು ಅಭ್ಯರ್ಥಿ ಎಂಬ ಕುತೂಹಲವಿದ್ದರೆ, ಮತದಾರ, ಕಾರ್ಯಕರ್ತರು ಯಾರನ್ನು ಬೆಂಬಲಿಸಬೇಕು ಎಂಬ ಸಮಸ್ಯೆಯಲ್ಲಿದ್ದಾರೆ. ಆದರೆ ಅಂತಿಮ ಚಿತ್ರಣಕ್ಕೆ ಇನ್ನು ಕೆಲವೇ ತಿಂಗಳು ಕಾಯಬೇಕಾದ ಅನಿವಾರ್ಯತೆಯೂ ಇದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *