ಬಲವಂತದ ಮತಾಂತರ ನಿಷೇಧ ತಡೆ ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ಮಂಡಿಸುವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರ ಸಭೆ ನಡೆಯಿತು.
ಬೆಂಗಳೂರು: ಬಲವಂತದ ಮತಾಂತರ ನಿಷೇಧ ತಡೆ ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ಮಂಡಿಸುವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರ ಸಭೆ ನಡೆಯಿತು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್ ಎಸ್ ಎಸ್ ಕಚೇರಿ ಕೇಶವಕೃಪಾದಲ್ಲಿ ಸಭೆ ನಡೆಸಲಾಗಿದ್ದು, ವಿಧೇಯಕ ಮಂಡನೆ ವೇಳೆ ವಿಧೇಯಕದ ಮಹತ್ವದ ಬಗ್ಗೆ ಸಮರ್ಥನೆ ಮಾಡಿಕೊಳ್ಳುವಂತೆ ಬಿಜೆಪಿ ವಿಧಾನ ಪರಿಷತ್ ಸದಸ್ಯರಿಗೆ ಆರ್ ಎಸ್ ಎಸ್ ಮುಖಂಡರು ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ವೈ.ಎ. ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಕೆ.ಎಸ್. ನವೀನ್, ತುಳಸಿ ಮುನಿರಾಜು ಗೌಡ, ಪ್ರತಾಪಸಿಂಹ ನಾಯಕ್, ಎಂ.ಕೆ. ಪ್ರಾಣೇಶ್ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. (ಕಪ್ರಡಾ)