ಮುರುಘಾ ಶರಣರು ಪೀಠ ತ್ಯಾಗ ಮಾಡಲು ನಿರ್ದೇಶಿಸಿ: ಹೈಕೋರ್ಟ್ ಸಿಜೆಗೆ ಯತ್ನಾಳ್ ಪತ್ರ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ.

ಬೆಂಗಳೂರು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಶಾಸಕ ಬಸನಗೌಡ ಯತ್ನಾಳ ಎರಡು ಪುಟದ ಪತ್ರ ಬರೆದಿದ್ದಾರೆ.  

ಮುರುಘಾಮಠದ ವಿಚಾರದ ಬಗ್ಗೆ ಉಲ್ಲೇಖಿಸಿದ್ದು ಸದ್ಯ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೂಡಲೇ ಪೀಠ ತ್ಯಾಗ ಮಾಡಲು ನಿರ್ದೇಶಿಸಬೇಕೆಂದು ಮನವಿ ಮಾಡಿದ್ದಾರೆ.

ಮಠದ ದೈನಂದಿನ ವ್ಯವಹಾರ ಸುಗಮವಾಗಿ ನಡೆಯಬೇಕು. ಸದ್ಯ ಮೇಲುಸ್ತುವಾರಿ ಸಮಿತಿ ರಚನೆಯಾಗಬೇಕು. ಇದಕ್ಕಾಗಿ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಿ. ಸುಪ್ರೀಂಕೋರ್ಟ್ ,ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ‌ ರಚಿಸಬೇಕು. ಶ್ರೀಗಳ ನ್ಯಾಯಾಂಗ ಬಂಧನ ಅಪಮಾನ. ಇದರಿಂದ ಇಡೀ ಲಿಂಗಾಯತ ಸಮುದಾಯಕ್ಕೆ ಅಪಮಾನವಾಗಿದೆ. ಹೀಗಾಗಿ ಶ್ರೀಗಳೇ ಪೀಠ ತ್ಯಾಗ ಮಾಡಬೇಕು ಎಂದಿದ್ದಾರೆ.

ಇಲ್ಲವೇ ಮಠದ ಭಕ್ತರು ಪೀಠದಿಂದ ಪದಚ್ಯುತಗೊಳಿಸಬೇಕು. ಮಠದ ಆಡಳಿತ ಸಂಪೂರ್ಣ ಅಸ್ತವ್ಯಸ್ಥವಾಗಿದೆ.ಕಾರ್ಯದರ್ಶಿ ವಸ್ತ್ರದ ಶ್ರೀಗಳಿಂದ ಏಕಪಕ್ಷೀಯವಾಗಿ ನೇಮಕಗೊಂಡಿದ್ದಾರೆ.ಇವರ ವಿರುದ್ಧ ಭಕ್ತರು ಅಸಮಾಧಾನಗೊಂಡಿದ್ದಾರೆ.ಕೂಡಲೇ‌ ಮೇಲುಸ್ತುವಾರಿ ಸಮಿತಿ‌ ರಚನೆ ಮಾಡಿ ಎಂದು ಹೈಕೋರ್ಟ್ ಸಿಜೆಗೆ ಮನವಿ‌ಪತ್ರದಲ್ಲಿ ಶಾಸಕ ಬಸವರಾಜ ಯತ್ನಾಳ್ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *