‘ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ’.. ಅಭಿಯಾನಕ್ಕೆ ಸರ್ಕಾರ ಸಜ್ಜು!

ಕಾಂಗ್ರೆಸ್​ನ ಪೇಸಿಎಂ ಅಭಿಯಾನದಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಇದಕ್ಕಾಗಿ ಲಂಚದ ವಿರುದ್ಧವಾಗಿ ಸರ್ಕಾರ ಅಭಿಯಾನವನ್ನು ಅಕ್ಟೋಬರ್​ 2ರಿಂದ ಆರಂಭಿಸಿಲಿದೆ.

ಬೆಂಗಳೂರು: ಪೇ ಸಿಎಂ ಅಭಿಯಾನದಿಂದ ಮುಜುಗರಕ್ಕೀಡಾಗಿರುವ ರಾಜ್ಯ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆಯ ಅಭಿಯಾನ ನಡೆಸಲು ಮುಂದಾಗಿದೆ.

‘ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ’ ಎಂಬ ನಾಮಫಲಕವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಲು ಆದೇಶ ಹೊರಡಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗಳಿಗೆ ಟಿಪ್ಪಣಿ ಬರೆದಿದ್ದಾರೆ.

ಸಿಟಿಜನ್ ಎನ್​ಕ್ವೈರಿ ಕೌನ್ಸಿಲ್ ಆ್ಯಂಡ್ ಸಿಇಸಿ ಟ್ರಸ್ಟ್ ಕಳೆದ ತಿಂಗಳು ಪತ್ರ ಬರೆದು ಸಂಸ್ಥೆ ಭ್ರಷ್ಟಾಚಾರ ನಿರ್ಮೂಲನೆ ಅಭಿಯಾನವನ್ನು ಅಕ್ಟೋಬರ್​ 2ರಿಂದ 20ರ ತನಕ ಹಮ್ಮಿಕೊಂಡಿದೆ. ಇದಕ್ಕಾಗಿ “ನನಗೆ ಯಾರು ಲಂಚ ಕೊಡಬೇಕಾಗಿಲ್ಲ. ನಾನು ಭ್ರಷ್ಟ ಅಧಿಕಾರಿಯಾಗಲಾರೆ” ಎಂಬ ಶೀರ್ಷಿಕೆಯ ನಾಮಫಲಕವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಅಳವಡಿಸಲು ಆದೇಶ ಮತ್ತು ಸುತ್ತೋಲೆಯನ್ನು ಹೊರಡಿಸುವಂತೆ ಮನವಿ ಮಾಡಿದ್ದರು.

ಈ ಮನವಿ ಸಂಬಂಧ ಮುಂದಿನ ಅಗತ್ಯ ಕ್ರಮಕ್ಕಾಗಿ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಗೆ ಕಳುಹಿಸಿ ಕೊಟ್ಟಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *