ಕಾಂಗ್ರೆಸ್​ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು…ನಾವು ಹೀನ-ಹೇಡಿ ಕೆಲಸ ಮಾಡಲ್ಲ-ಬಿ.ಜೆ.ಪಿ.

Thumbnail image

ನಾಳೆ ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಆಗಮನ: ಕಾಂಗ್ರೆಸ್​ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

ನಾಳೆ ಗುಂಡ್ಲುಪೇಟೆಗೆ ಭಾರತ್ ಜೋಡೋ ಯಾತ್ರೆ ಆಗಮಿಸಲಿದೆ. ಈ ಹಿನ್ನೆಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ‌ ಹೋಟೆಲ್‌ನಿಂದ ಊಟಿ ರಸ್ತೆಯುದ್ದಕ್ಕೂ ಫ್ಲೆಕ್ಸ್​ ಅಳವಡಿಸಲಾಗಿದ್ದು, ಯಾರೋ ಕಿಡಿಗೇಡಿಗಳು ಫ್ಲೆಕ್ಸ್ ಗಳನ್ನು ಹರಿದುಹಾಕಿದ್ದಾರೆ.

ಚಾಮರಾಜನಗರ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ‌ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿಕೊಂಡಿರುವ ಭಾರತ್ ಜೋಡೋ‌ ಯಾತ್ರೆ ಸೆ.30 ರಂದು ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್​ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಹರಿದುಹಾಕಿದ್ದಾರೆ.

bharat jodo yatra

ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು

ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ‌ ಹೋಟೆಲ್‌ನಿಂದ ಊಟಿ ರಸ್ತೆಯ ಉದ್ದಕ್ಕೂ ಅಳವಡಿಸಿದ್ದ ಫ್ಲೆಕ್ಸ್​ಗಳಿಗೆ ಕಿಡಿಗೇಡಿಗಳು ಬ್ಲೇಡ್ ಹೊಡೆದಿದ್ದಾರೆ‌. ಎಐಸಿಸಿ‌ ನಾಯಕ ರಾಹುಲ್‌ ಗಾಂಧಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಚಾಮರಾಜನಗರ ಶಾಸಕ ಸಿ ಪುಟ್ಟರಂಗಶೆಟ್ಟಿ ಭಾವಚಿತ್ರಗಳಿರುವ ಫ್ಲೆಕ್ಸ್ ಅನ್ನು ಹರಿದು ಹಾಕಲಾಗಿದೆ.

ಕಾಂಗ್ರೆಸ್ ಮುಖಂಡರು ಬಿಜೆಪಿಯವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ರೆ, ತಾವು ಈ ರೀತಿಯ ಹೀನ, ಹೇಡಿ ಕೆಲಸ ಮಾಡಲ್ಲ ಎಂದು ಬಿಜೆಪಿಗರು ಕಿಡಿಕಾರಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *