ಸೊರಬದ ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದಯ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಸ್ವಾಗತಿಸಿದರು.
ಶಿವಮೊಗ್ಗ: ಸೊರಬದ ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಇಂದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜು ತಲ್ಲೂರು ಅವರಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತ ಕೋರಿದರು.
ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರಾಜುರವರು ಮಹತ್ವಕಾಂಕ್ಷೆಯ ವ್ಯಕ್ತಿಯಾಗಿದ್ದು, ಅವರು ಕೇವಲ ಸೊರಬಕ್ಕೆ ಸೀಮಿತವಾಗದೇ, ರಾಜ್ಯದಲ್ಲಿ ಹಿಂದುಳಿದ ವರ್ಗದ ರಾಜ್ಯ ನಾಯಕರಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ಪಕ್ಷಕ್ಕೆ ದುಡಿದರೆ, ಮುಂದೆ ಪಕ್ಷ ನಿಮಗೆ ಉತ್ತಮ ಅವಕಾಶವನ್ನು ನೀಡುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಜು ತಲ್ಲೂರು
ಬಳಿಕ ಮಾತನಾಡಿದ ರಾಜು ತಲ್ಲೂರು, ನಮ್ಮ ಮಡಿವಾಳ ಸಮಾಜದಿಂದ ಇದುವರೆಗೂ ಯಾರು ಕೂಡ ಶಾಸಕರಾಗಿಲ್ಲ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಇದೆ. ನಾನು ನನ್ನ ಮುಂದಿನ ರಾಜಕೀಯ ಭವಿಷ್ಯವನ್ನು ಇಟ್ಟುಕೊಂಡು ಬಿಜೆಪಿಗೆ ಬಂದಿದ್ಧೇನೆ ಎಂದು ಹೇಳಿದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.
ರಾಜುರವರು ಸೊರಬ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಗಬಹುದೆಂಬ ಬಯಕೆಯನ್ನು ಹೊಂದಿದ್ದರು. ಆದರೆ ಕಾಂಗ್ರೆಸ್ಗೆ ಮಧು ಬಂಗಾರಪ್ಪ ಸೇರ್ಪಡೆಯಾದ ನಂತರ ಟಿಕೆಟ್ ಸಿಗುವುದಿಲ್ಲ ಎಂಬುದು ಖಚಿತವಾದ ಮೇಲೆ ರಾಜು ಬಿಜೆಪಿ ಸೇರ್ಪಡೆಯಾಗಿದ್ದಾರೆ.(ಈಟಿಬಿಕೆ)