ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಜು ತಲ್ಲೂರು

Thumbnail image

ಸೊರಬದ ಕಾಂಗ್ರೆಸ್​ ಮುಖಂಡ ರಾಜು ತಲ್ಲೂರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್​ ತೊರೆದಯ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಸ್ವಾಗತಿಸಿದರು.

ಶಿವಮೊಗ್ಗ: ಸೊರಬದ ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಇಂದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜು ತಲ್ಲೂರು ಅವರಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತ ಕೋರಿದರು.

ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರಾಜುರವರು ಮಹತ್ವಕಾಂಕ್ಷೆಯ ವ್ಯಕ್ತಿಯಾಗಿದ್ದು, ಅವರು ಕೇವಲ ಸೊರಬಕ್ಕೆ ಸೀಮಿತವಾಗದೇ, ರಾಜ್ಯದಲ್ಲಿ ಹಿಂದುಳಿದ ವರ್ಗದ ರಾಜ್ಯ ನಾಯಕರಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ಪಕ್ಷಕ್ಕೆ ದುಡಿದರೆ, ಮುಂದೆ ಪಕ್ಷ ನಿಮಗೆ ಉತ್ತಮ ಅವಕಾಶವನ್ನು ನೀಡುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಜು ತಲ್ಲೂರು

ಬಳಿಕ ಮಾತನಾಡಿದ ರಾಜು ತಲ್ಲೂರು, ನಮ್ಮ ಮಡಿವಾಳ ಸಮಾಜದಿಂದ ಇದುವರೆಗೂ ಯಾರು ಕೂಡ ಶಾಸಕರಾಗಿಲ್ಲ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಇದೆ. ನಾನು ನನ್ನ ಮುಂದಿನ ರಾಜಕೀಯ ಭವಿಷ್ಯವನ್ನು ಇಟ್ಟುಕೊಂಡು ಬಿಜೆಪಿಗೆ ಬಂದಿದ್ಧೇನೆ ಎಂದು ಹೇಳಿದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.

ರಾಜುರವರು ಸೊರಬ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ನಲ್ಲಿ ಟಿಕೆಟ್​ ಸಿಗಬಹುದೆಂಬ ಬಯಕೆಯನ್ನು ಹೊಂದಿದ್ದರು. ಆದರೆ ಕಾಂಗ್ರೆಸ್​​​​​​​​​​ಗೆ ಮಧು ಬಂಗಾರಪ್ಪ ಸೇರ್ಪಡೆಯಾದ ನಂತರ ಟಿಕೆಟ್​ ಸಿಗುವುದಿಲ್ಲ ಎಂಬುದು ಖಚಿತವಾದ ಮೇಲೆ ರಾಜು ಬಿಜೆಪಿ ಸೇರ್ಪಡೆಯಾಗಿದ್ದಾರೆ.(ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *