

ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ ಮಾಡಿದ್ದು ಸುದ್ದಿಯೇ ಅಲ್ಲ: ರಮ್ಯಾ!
ಭಾರತ ಜೋಡೋ ಯಾತ್ರೆ ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.



ಬೆಂಗಳೂರು: ಭಾರತ ಜೋಡೋ ಯಾತ್ರೆ ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ರಾಹುಲ್ ಗಾಂಧಿ ಮಳೆಯಲ್ಲಿಯೇ ಭಾಷಣ ಮಾಡುತ್ತಿರುವ ವಿಡಿಯೋವನ್ನು ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ ಕೂಡ ಶೇರ್ ಮಾಡಿಕೊಂಡು ಕ್ಯಾಪ್ಷನ್ ಕೊಟ್ಟಿದ್ದಾರೆ. ಇಲ್ಲಿ ರಾಹುಲ್ ಗಾಂಧಿ ಮಳೆಯಲ್ಲಿ ಭಾಷಣ ಮಾಡುತ್ತಿರುವುದು ಸುದ್ದಿಯಲ್ಲ, ಆ ಜಿಡಿ ಮಳೆಯಲ್ಲಿಯೂ ಭಾಷಣ ಕೇಳಲು ಸಾಕಷ್ಟು ಮಂದಿ ನೆರೆದಿರುವುದೇ ವಿಶೇಷ. ಜನ ನೆರೆದಿರುವುದೇ ಎಲ್ಲವನ್ನೂ ನಿಮಗೆ ತಿಳಿಸುತ್ತದೆ. ಅಂದರೆ ರಾಹುಲ್ ಗಾಂಧಿ ಭಾಷಣ ಕೇಳಲು ಜನ ಕಿಕ್ಕಿರಿದು ನಿಂತಿರುವುದು ಗಮನಸೆಳೆದಿದೆ ಎಂದು ಹೇಳುವ ಮೂಲಕ ರಮ್ಯಾ ಅವರು ಕೈ ನಾಯಕನನ್ನು ಹಾಡಿ ಹೊಗಳಿದ್ದಾರೆ. (kpc)
