ಬಿಆರ್‌ಎಸ್ ಜೊತೆ ಜೆಡಿಎಸ್ ಮೈತ್ರಿ: ಹೆಚ್ ಡಿ ಕುಮಾರಸ್ವಾಮಿ

Thumbnail image

ಕೆಸಿಆರ್ ಹೊಸ ರಾಷ್ಟ್ರೀಯ ಪಕ್ಷ ಬಿಆರ್‌ಎಸ್ ಜೊತೆ ಜೆಡಿಎಸ್ ಮೈತ್ರಿ: ಹೆಚ್ ಡಿ ಕುಮಾರಸ್ವಾಮಿ

ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (BRS) ಹೆಸರಿನಲ್ಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಪಾಲ್ಗೊಂಡರು. ಈ ವೇಳೆ ಹೊಸ ರಾಷ್ಟ್ರೀಯ ಪಕ್ಷಕ್ಕೆ ಸಾತ್ ನೀಡುವ ಅಭಯ ನೀಡಿದರು.

ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (BRS) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ಹೇಳಿದರು.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮಾತನಾಡುತ್ತಿರುವುದು

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮಾತನಾಡುತ್ತಿರುವುದು

ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (BRS) ಹೆಸರಿನಲ್ಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಪಾಲ್ಗೊಂಡರು. ಈ ವೇಳೆ ಹೊಸ ರಾಷ್ಟ್ರೀಯ ಪಕ್ಷಕ್ಕೆ ಸಾತ್ ನೀಡುವ ಅಭಯ ನೀಡಿದರು.

ಮುಕ್ತಮನಸ್ಸಿನಿಂದ ಸ್ವಾಗತಿಸುತ್ತಿದೆ: ನಂತರ ಬೆಂಗಳೂರಿಗೆ ಹೊರಡುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಮೊದಲಿನಿಂದಲೂ ಜೆಡಿಎಸ್ ಮತ್ತು ಟಿಆರ್​ಎಸ್ ಪಕ್ಷಗಳು ಸಹಜ ಮಿತ್ರಪಕ್ಷಗಳಾಗಿದ್ದವು. ಪರಸ್ಪರ ವಿಶ್ವಾಸದಿಂದ ಕೆಲಸ ಮಾಡಿಕೊಂಡು ಬಂದಿವೆ. ಈಗ ಟಿಆರ್​ಎಸ್​ ರಾಷ್ಟ್ರೀಯ ಪಕ್ಷವಾಗಿ ಬಿಆರ್​ಎಸ್ ಹೆಸರಿನಲ್ಲಿ ಹೊರಹೊಮ್ಮಿರುವುದನ್ನು ನಮ್ಮ ಪಕ್ಷ ಮುಕ್ತಮನಸ್ಸಿನಿಂದ ಸ್ವಾಗತಿಸುತ್ತಿದೆ. ಮುಂದಿನ ದಿನಗಳಲ್ಲಿ ನಾವು ಕೆ. ಚಂದ್ರಶೇಖರ್ ರಾವ್ ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದರು.

2023ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಆರ್​​ಎಸ್ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲಿವೆ. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯ ವಾತಾವರಣವಿದೆ. ಅದೇ ಸ್ಥಿತಿಯನ್ನು ಕರ್ನಾಟದಲ್ಲೂ ತರಲು ನಾನು ಮತ್ತು ಚಂದ್ರಶೇಖರ್ ರಾವ್ ಅವರೂ ನಿರ್ಧಾರ ಮಾಡಿದ್ದೇವೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.

ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ತೆಲಂಗಾಣ ಸಿಎಂ ಕೆಸಿಆರ್ ಮಾತುಕತೆ

ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ತೆಲಂಗಾಣ ಸಿಎಂ ಕೆಸಿಆರ್ ಮಾತುಕತೆ

ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹೊರತಾದ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡುವ ಬಗ್ಗೆ ಎರಡೂ ಪಕ್ಷಗಳು ಸದೃಢವಾಗಿ ಕೆಲಸ ಮಾಡಲಿವೆ. ಸಂಪೂರ್ಣ ಬೆಂಬಲ ನೀಡುವುದಾಗಿ ಕೆಸಿಆರ್ ಅವರು ಭರವಸೆ ನೀಡಿದ್ದಾರೆ. 2023ರ ಚುನಾವಣೆಯಲ್ಲಿ ಫಲಿತಾಂಶ ಜೆಡಿಎಸ್ ಪರವಾಗಿ ಬಂದರೆ, ಅದು 2024ರ ಲೋಕಸಭೆ ಚುನಾವಣೆಗೆ ಹೊಸ ದಿಕ್ಸೂಚಿಯಾಗಲಿದೆ.

ಕರ್ನಾಟಕವೂ ರಾಷ್ಟ್ರ ರಾಜಕಾರಣದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ. ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರ್ಕಾರ ತರುವ ನಿಟ್ಟಿನಲ್ಲಿಯೂ ನಾವಿಬ್ಬರೂ ಚರ್ಚೆ ನಡೆಸಿದ್ದೇವೆ. ಅದಕ್ಕೆ ಇವತ್ತಿನ ಕಾರ್ಯಕ್ರಮ ವೇದಿಕೆಯಾಗಿದೆ ಎಂದು ಹೇಳಿದರು.

ಜನಪರ ಕಾರ್ಯಕ್ರಮ ರಾಜ್ಯದಲ್ಲೂ ಜಾರಿ: ದೃಢ ನಾಯಕತ್ವದ ಕೆಸಿಆರ್ ಅವರು ತಮ್ಮ ಸಂಕಲ್ಪ ಬಲದಿಂದಲೇ ತೆಲಂಗಾಣದ ಜನರನ್ನು ಒಟ್ಟಾಗಿ ಕರೆದೊಯ್ದು ತೆಲಂಗಾಣ ರಾಜ್ಯವನ್ನು ಸಾಧನೆ ಮಾಡಿದರು. ನಂತರ ತಮ್ಮ ಆಡಳಿತಾವಧಿಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು.

ʼರೈತಬಂಧುʼ, ʼದಲಿತ ಬಂಧುʼದಂತಹ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದು ಸರ್ಕಾರದ ಕಾರ್ಯಕ್ರಮಗಳು ಪ್ರತೀ ನಾಗರಿಕನಿಗೂ ತಲುಪುವಂತೆ ಮಾಡಿದರು. ಇದೇ ರೀತಿಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಕೂಡ ಮಾಡಿತ್ತು. ಮುಂದಿನ ದಿನಗಳಲ್ಲಿ ಅಂತಹ ಜನಪರ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲೂ ಜಾರಿಗೆ ತರಲಾಗುವುದು ಎಂದರು.

ರಾಜಕೀಯ ಏಕಸ್ವಾಮ್ಯತೆಗೆ ಅಂತ್ಯ: ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯ ಇತ್ತು. ಕೆಲವೇ ಪಕ್ಷಗಳ ರಾಜಕೀಯ ಏಕಸ್ವಾಮ್ಯತೆಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು. ಅದಕ್ಕೆ ಬಿಆರ್​ಎಸ್ ಒಂದು ಪ್ರಬಲ ಪರ್ಯಾಯ ಎನ್ನುವುದು ನನ್ನ ಭಾವನೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್ ಸೇರಿದಂತೆ ಇನ್ನೂ ಹಲವಾರು ಪ್ರಮುಖ ಪಕ್ಷಗಳ ನಾಯಕರು ಬಿಆರ್​ಎಸ್​ ಒಕ್ಕೂಟದಲ್ಲಿ ಕೆಲಸ ಮಾಡಲಿವೆ ಎನ್ನುವ ವಿಶ್ವಾಸ ನನಗಿದೆ. ಅಂತಹ ಪ್ರಯತ್ನ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಜೆಡಿಎಸ್-ಬಿಆರ್​ಎಸ್​ ಮಿತ್ರಪಕ್ಷಗಳಾಗಿ ಮುನ್ನಡೆಯಲಿವೆ ಎಂದು ಹೇಳಿದರು.

ದೇಶದ ಸಂಪತ್ತು ಸಮಾನ ಹಂಚಿಕೆ: ರೈತರು, ದಲಿತರು ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲ ವರ್ಗದ ಜನರ ಕಲ್ಯಾಣಕ್ಕಾಗಿ ಕೆಸಿಆರ್ ಅವರು ಪರಿಣಾಮ ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ತೆಲಂಗಾಣದಲ್ಲಿ ಅಂಥ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಮುಖ್ಯವಾಗಿ ದೇಶದ ಸಂಪತ್ತು ಕೆಲವರಲ್ಲಿಯೇ ಸಂಗ್ರಹವಾಗದೇ ಅದು ಸಮಾನ ಹಂಚಿಕೆ ಆಗಬೇಕು. ಸಾಮಾನ್ಯನಿಗೂ ಆ ಸಂಪತ್ತಿನಲ್ಲಿ ಪಾಲಿರಬೇಕು ಎನ್ನುವ ಗುರಿಯೊಂದಿಗೆ ಅವರು ಕೆಲಸ ಮಾಡುತ್ತಿದ್ದಾರೆ.

ಕೆಸಿಆರ್ ಅವರು ತಮ್ಮ ರಾಜ್ಯದಲ್ಲಿ ರೈತರಿಗೆ, ದಲಿತರಿಗೆ ಹಾಗೂ ದುರ್ಬಲರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಬಿಆರ್​ಎಸ್ ಸ್ಥಾಪನೆ ಬಗ್ಗೆ ಈ ಹಿಂದೆಯೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿಗಳಾದ ಹೆಚ್. ಡಿ ದೇವೇಗೌಡರು, ನನ್ನ ಜತೆ ಕೆಸಿಆರ್ ಅವರು ಸಮಾಲೋಚನೆ ನಡೆಸಿದ್ದರು. ಕೆಲ ದಿನಗಳ ಹಿಂದೆ ಸ್ವತಃ ನಾನೇ ಹೈದರಾಬಾದ್​ಗೆ ಭೇಟಿ ನೀಡಿ ಚರ್ಚೆ ಮಾಡಿದ್ದೆ. ನಮ್ಮನ್ನು ಪರಿಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಅವರು ಈ ಹೆಜ್ಜೆ ಇರಿಸಿದ್ದಾರೆ ಎಂದು ಹೇಳಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *