ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಮೂಲಕ ಪಾದಯಾತ್ರೆಗೆ ಬಲ ತುಂಬಿದ್ದಾರೆ. ಪಾಂಡವಪುರದಿಂದ ಆರಂಭವಾದ ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ ಕೆಲಕಾಲ ಹೆಜ್ಜೆ ಹಾಕಿದರು.
ಮಂಡ್ಯ: ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಂಡ್ಯದ ಪಾಂಡವಪುರದ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಬೆಳಗ್ಗೆ ಪಾದಯಾತ್ರೆ ಶುರುವಾಗಿದೆ.
ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ: ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು. ಇದರಿಂದ ಪಾದಯಾತ್ರೆಗೆ ಸೋನಿಯಾ ಗಾಂಧಿ ಬಲ ತುಂಬಿದರು. ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹರಿಪ್ರಸಾದ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ
ಬೆಳಗ್ಗೆ 11 ಗಂಟೆವರೆಗೆ ಪಾದಯಾತ್ರೆ ಮಾಡಿ ಬಳಿಕ ಖಾರಾದ್ಯ ಕೆರೆ ಬಳಿ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಖಾರಾದ್ಯ ಕೆರೆಯಿಂದ ಆರಂಭವಾಗುವ ಪಾದಯಾತ್ರೆ ಸಂಜೆ 7 ಗಂಟೆಗೆ ಮಂಡ್ಯದ ಬ್ರಹ್ಮದೇವರ ಹಳ್ಳಿ ಗ್ರಾಮ ತಲುಪಲಿದೆ.
ಅಕ್ಟೋಬರ್ 3ರಂದು ಮೈಸೂರಿಗೆ ಬಂದಿರುವ ಸೋನಿಯಾ ಗಾಂಧಿ ಅವರು ಕಬಿನಿ ಹಿನ್ನೀರಿನ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ರು. ಇಂದು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ನಾಳೆ (ಶುಕ್ರವಾರ) ನಾಗಮಂಗಲದಲ್ಲಿ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಭಾಗವಹಿಸುವ ಸಾಧ್ಯತೆ ಇದೆ. (etbk)