ಮಂಡ್ಯದಲ್ಲಿ ಭಾರತ್ ಜೋಡೋ: ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ

Thumbnail image

ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಮೂಲಕ ಪಾದಯಾತ್ರೆಗೆ ಬಲ ತುಂಬಿದ್ದಾರೆ. ಪಾಂಡವಪುರದಿಂದ ಆರಂಭವಾದ ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ ಕೆಲಕಾಲ ಹೆಜ್ಜೆ ಹಾಕಿದರು.

ಮಂಡ್ಯ: ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್‌ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್​​ ಗಾಂಧಿ ನೇತೃತ್ವದಲ್ಲಿ ಮಂಡ್ಯದ ಪಾಂಡವಪುರದ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಬೆಳಗ್ಗೆ ಪಾದಯಾತ್ರೆ ಶುರುವಾಗಿದೆ.

ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ: ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು. ಇದರಿಂದ ಪಾದಯಾತ್ರೆಗೆ ಸೋನಿಯಾ ಗಾಂಧಿ ಬಲ ತುಂಬಿದರು. ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್​ ಪ್ರತಿಪಕ್ಷ ನಾಯಕ ಹರಿಪ್ರಸಾದ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ

ಬೆಳಗ್ಗೆ 11 ಗಂಟೆವರೆಗೆ ಪಾದಯಾತ್ರೆ ಮಾಡಿ ಬಳಿಕ ಖಾರಾದ್ಯ ಕೆರೆ ಬಳಿ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಖಾರಾದ್ಯ ಕೆರೆಯಿಂದ ಆರಂಭವಾಗುವ ಪಾದಯಾತ್ರೆ ಸಂಜೆ 7 ಗಂಟೆಗೆ ಮಂಡ್ಯದ ಬ್ರಹ್ಮದೇವರ ಹಳ್ಳಿ ಗ್ರಾಮ ತಲುಪಲಿದೆ.

ಅಕ್ಟೋಬರ್​ 3ರಂದು ಮೈಸೂರಿಗೆ ಬಂದಿರುವ ಸೋನಿಯಾ ಗಾಂಧಿ ಅವರು ಕಬಿನಿ ಹಿನ್ನೀರಿನ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ರು. ಇಂದು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ನಾಳೆ (ಶುಕ್ರವಾರ) ನಾಗಮಂಗಲದಲ್ಲಿ ಭಾರತ್‌ ಜೋಡೋ ಪಾದಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಭಾಗವಹಿಸುವ ಸಾಧ್ಯತೆ ಇದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *