ಭಾರತ್ ಜೋಡೋ ಯಾತ್ರೆ.. ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಇಂದಿರಾ – ಕವಿತಾ ಲೋಕೇಶ್
ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜತೆಗೆ ಇಂದಿರಾ ಹಾಗೂ ಕವಿತಾ ಲಂಕೇಶ್ ಅವರು ಹೆಜ್ಜೆಹಾಕಿದ್ದಾರೆ.
ಮಂಡ್ಯ: ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್ ಹಾಗೂ ಸಹೋದರಿ ಕವಿತಾ ಲಂಕೇಶ್ ಅವರು ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.
ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜತೆಗೆ ಇಂದಿರಾ ಹಾಗೂ ಕವಿತಾ ಲಂಕೇಶ್ ಅವರು ಹೆಜ್ಜೆಹಾಕಿದ್ದಾರೆ.
‘ಗೌರಿ ಸತ್ಯಕ್ಕಾಗಿ, ಧೈರ್ಯಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ನಿಂತಳು. ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಇತರರು ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುತ್ತಾರೆ. ಭಾರತ್ ಜೋಡೋ ಯಾತ್ರೆ ಅವರ ಧ್ವನಿಯಾಗಿದೆ. ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ’ ಎಂದು ರಾಹುಲ್ ಗಾಂಧಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. (kpc)