

ಹಾರ್ಸಿಕಟ್ಟಾ ಕಲಾಪೋಷಕರ ಊರಾಗಿದ್ದು, ಕಲೆ,ಸಂಸ್ಕೃತಿ,ಕ್ರೀಡಾ ಪೋಷಣೆಗಳಿಂದ ಈ ಗ್ರಾಮಕ್ಕೆ ಪ್ರತ್ಯೇಕ ಐಡೆಂಟಿಟಿ ದೊರೆತಿದೆ. -ಕನ್ನೇಶ್

ಸಿದ್ದಾಪುರ
ಯಕ್ಷಗಾನದಿಂದ ಪುರಾಣ ಕಥೆಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಉತ್ತಮ ಸಂಸ್ಕೃತಿ ಪೋಷಣೆಗೆ ಉತ್ತೇಜನ ದೊರೆಯುತ್ತದೆ . ಕಳೆದ ವರ್ಷ ಉಪೇಂದ್ರ ಪೈ ಸೇವಾ ಟ್ರಸ್ಟ್ ನಿಂದ ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಹತ್ತು ಯಕ್ಷಗಾನ ಕಾರ್ಯಕ್ರಮ ಆಯೋಜಿಸಿಲಾಗಿತ್ತು. ಈ ವರ್ಷ ೨೦ ಯಕ್ಷಗಾನ ಕಾರ್ಯಕ್ರಮ ಮಾಡಲಾಗುವುದು ಎಂದು ಉದ್ಯಮಿ ಉಪೇಂದ್ರ ಪೈ ಶಿರಸಿ ಹೇಳಿದರು.
ತಾಲೂಕಿನ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ಯಕ್ಷತರಂಗಿಣಿ ಹಾರ್ಸಿಕಟ್ಟಾ ಆಯೋಜಿಸಿದ್ದ ಮಕ್ಕಳ ಯಕ್ಷಗಾನ ತರಬೇತಿ ಶಿಬಿರದ ಮುಕ್ತಾಯ ಸಮಾರಂಭವನ್ನು ಉದ್ಘಾಟಿಸಿ ಯಕ್ಷಸಿರಿ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಕೃಷ್ಣ ಜಿ. ಬೇಡ್ಕಣಿ ಅವರನ್ನು ಸನ್ಮಾನಿಸಿ ಬುಧವಾರ ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕೃಷ್ಣ ಜಿ.ನಾಯ್ಕ ಬೇಡ್ಕಣಿ ಯಕ್ಷಗಾನ ಕಲೆ ಮುಂದುವರೆಯಬೇಕಾದರೆ ಮಕ್ಕಳಿಗೆ ಯಕ್ಷಗಾನವನ್ನು ಕಲಿಸಬೇಕು.ಮಕ್ಕಳಿಗೆ ಯಕ್ಷಗಾನವನ್ನು ಕಲಿಸುವುದರಿಂದ ಕಲೆಯ ಬೆಳವಣಿಗೆಯೂ ಆಗುತ್ತದೆ ಎಂದು ಹೇಳಿದರು.
ಪ್ರಾಚಾರ್ಯ ಎಂ.ಕೆ.ನಾಯ್ಕ ಹೊಸಳ್ಳಿ ಅಧ್ಯಕ್ಷತೆವಹಿಸಿದ್ದರು. ಟೀಮ್ ಪರಿವರ್ತನಾ ಸಂಸ್ಥಾಪಕ ಹಿತೇಂದ್ರ ನಾಯ್ಕ, ಪತ್ರಕರ್ತ ಕನ್ನೇಶ ನಾಯ್ಕ ಕೋಲಶಿರ್ಸಿ, ಹಾರ್ಸಿಕಟ್ಟಾ ಅಘನಾಶಿನಿ ಸಾಂಬಾರು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಹೆಗಡೆ ಕುಂಬಾರಕುಳಿ, ಅನಂತ ಶಾನಭಾಗ, ಪಿ.ವಿ.ಹೆಗಡೆ, ಧನಂಜಯ ನಾಯ್ಕ ಉಪಸ್ಥಿತರಿದ್ದರು.
ಪತ್ರಕರ್ತ ನಾಗರಾಜ ಹೆಗಡೆ ಮತ್ತಿಗಾರ ಅಭಿನಂದನಾ ಮಾತನಾಡಿದರು. ರಮೇಶ ಹೆಗಡೆ ಹಾರ್ಸಿಮನೆ ನಿರ್ವಹಿಸಿದರು. ನಂದನ ನಾಯ್ಕ ಅರಶಿನಗೋಡ ವಂದಿಸಿದರು.
ನಂತರ ಶಿಬಿರದ ವಿದ್ಯಾರ್ಥಿಗಳಿಂದ ಚಕ್ರವ್ಯೂಹ ಯಕ್ಷಗಾನ ಪ್ರದರ್ಶನಗೊಂಡಿತು. ಹಿಮ್ಮೇಳದಲ್ಲಿ ರಾಮಚಂದ್ರ ನಾಯ್ಕ ಹೆಮ್ಮನಬೈಲ್, ಮಂಜುನಾಥ ಹೆಗಡೆ ಗುಡ್ಡೆದಿಂಬ, ಧನಂಜಯ ನಾಯ್ಕ ಪುರದಮಠ ಸಹಕರಿಸಿದರು. ಶಿಬಿರಾರ್ಥಿಗಳೊಂದಿಗೆ ಕೃಷ್ಣ ಜಿ.ನಾಯ್ಕ ಬೇಡ್ಕಣಿ ದ್ರೋಣನ ಪಾತ್ರದಲ್ಲಿ ಹಾಗೂ ಯುವರಾಜ್ ನಾಯ್ಕ ಹಳಿಯಾಳ ಅಭಿಮನ್ಯುವಿನ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿ ಮತ್ತು ಕು.ಭೂಮಿಕಾ ಪ್ರಸನ್ನ ಹೆಗಡೆ ಹೊಸಗದ್ದೆ ಇವಳು ಪ್ರಥಮ ಬಾರಿಗೆ ಚಂಡೆ ನುಡಿಸಿ ಕಲಾಸಕ್ತರ ಮೆಚ್ಚುಗೆಗಳಿಸಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
