




ನಗರದ ಹಿರಿಯ ವಕೀಲ ಕಮಲಾಕರ ಗಣಪ ನಾಯ್ಕ ಮಳಗುಳಿ ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಘಟಕದ ಕಾನೂನು ವಿಭಾಗದ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಲೇ ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿ ಸೇವೆ ಸಲ್ಲಿಸುತಿದ್ದರು. ಈ ಅನುಭವದ ಆಧಾರದಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ ಅನುಮೋದನೆ ಮೇರೆಗೆ ಇವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.

