ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ: ಸುಪ್ರೀಂ ಕೋರ್ಟ್ ನಿಂದ ರಾಜ್ಯ ಚುನಾವಣಾ ಆಯೋಗ ಅರ್ಜಿ ತಿರಸ್ಕಾರ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿದೆ. ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. 

Supreme court

ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿದೆ.ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. 

ಕಳೆದ ವರ್ಷ ಮೇ ತಿಂಗಳಲ್ಲಿ ನಿಗದಿಯಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ಕುರಿತು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಲಿಲ್ಲ. ನಿನ್ನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅರ್ಜಿಯು ಹೈಕೋರ್ಟ್‌ನಲ್ಲಿ ಇತ್ಯರ್ಥಕ್ಕೆ ಬಾಕಿ ಇರುವಾಗ ಮದ್ಯಪ್ರವೇಶಿಸುವುದಿಲ್ಲ ಎಂದು ಕಾರಣ ನೀಡಿತು.

ಕ್ಷೇತ್ರಗಳ ವಿಂಗಡಣೆ ಮತ್ತು ಮೀಸಲಾತಿಯನ್ನು ಪೂರ್ಣಗೊಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿದ್ದು, ಇನ್ನು ಕೆಲ ದಿನಗಳಲ್ಲಿ ಅದು ಮುಕ್ತಾಯಗೊಳ್ಳಲಿದೆ. ಈ ಸಂಬಂಧ ಮತ್ತೆ ಹೈಕೋರ್ಟ್ ಮೊರೆ ಹೋಗುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. 

ಕಳೆದ ವರ್ಷ ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಗಳ ಅವಧಿ ಮುಗಿದಾಗ ಚುನಾವಣಾ ಆಯೋಗ ಚುನಾವಣೆ ನಡೆಸಲು ಸಜ್ಜಾಗಿತ್ತು. 

ಚುನಾವಣಾ ಆಯೋಗ ಕ್ಷೇತ್ರ ಮರುವಿಂಗಡಣೆ(Delimitation) ನಡೆಸಿದ್ದು ಮೀಸಲಾತಿಗೆ ಸೀಟು ನಿಗದಿಯನ್ನು ನಡೆಸಿತ್ತು. ಚುನಾವಣಾ ದಿನಾಂಕಗಳನ್ನು ಘೋಷಿಸುವ ಹೊತ್ತಿಗೆ, ರಾಜ್ಯ ಸರ್ಕಾರವು ಚುನಾವಣಾ ಆಯೋಗದಿಂದ ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿಯ ಅಧಿಕಾರವನ್ನು ಹಿಂತೆಗೆದುಕೊಂಡು ಪ್ರತ್ಯೇಕ ಗಡಿ ನಿರ್ಣಯ ಆಯೋಗವನ್ನು ಸ್ಥಾಪಿಸಿತು. ನಂತರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿತ್ತು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……

ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ....

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ...

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *