ರಾಜೀವ್ ಗಾಂಧಿ ಹಂತಕರ ಬಿಡುಗಡೆ ಬಗ್ಗೆ ಕೇಂದ್ರ ಮೌನ; “ಉಗ್ರರೊಂದಿಗೆ ರಾಜಿ” ಎಂದ ಕಾಂಗ್ರೆಸ್

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಉಳಿದ ಆರು ಅಪರಾಧಿಗಳನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡುವಂತೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಮೋದಿ ಸರ್ಕಾರ ಮೌನ ವಹಿಸಿರುವುದು ‘ಭಯೋತ್ಪಾದನಾ ಕೃತ್ಯದ…

nalini1

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಉಳಿದ ಆರು ಅಪರಾಧಿಗಳನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡುವಂತೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಮೋದಿ ಸರ್ಕಾರ ಮೌನ ವಹಿಸಿರುವುದು ‘ಭಯೋತ್ಪಾದನಾ ಕೃತ್ಯದ ಜತೆ ರಾಜಿ ಮಾಡಿಕೊಂಡಂತೆ’ ಎಂದು ಕಾಂಗ್ರೆಸ್ ಶನಿವಾರ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್ ಪಿ ರವಿಚಂದ್ರನ್ ಸೇರಿದಂತೆ ಆರು ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಬಿ ವಿ ನಾಗರತ್ನ ಅವರ ಪೀಠವು ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎ ಜಿ ಪೆರಾರಿವಾಲನ್ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಅವರ ವಿಷಯದಲ್ಲೂ ಸಮಾನವಾಗಿ ಅನ್ವಯಿಸುತ್ತದೆ ಎಂದು ಹೇಳಿದೆ.

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್, ಭಯೋತ್ಪಾದಕರ ಬಗ್ಗೆ ಯಾವುದೇ ಸಹಾನುಭೂತಿ ಇರಬಾರದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ.

ರಾಜೀವ್ ಗಾಂಧಿ ಹತ್ಯೆಯ ಅಪರಾಧಿಗಳ ಬಿಡುಗಡೆ ಕುರಿತು ಮೋದಿ ಸರ್ಕಾರದ ಮೌನ ಖಂಡನೀಯ. ಇದು ಭಯೋತ್ಪಾದನಾ ಕೃತ್ಯದ ಜತೆಗಿನ ರಾಜಿ ಎಂದು ವೇಣುಗೋಪಾಲ್ ಹೇಳಿದ್ದಾರೆ. ಅಲ್ಲದೆ ಈ ಭಯೋತ್ಪಾದಕರ ಬಿಡುಗಡೆಯನ್ನು ಶ್ಲಾಘಿಸುವವರು ಪರೋಕ್ಷವಾಗಿ ಉಗ್ರರಿಗೆ ಧೈರ್ಯ ತುಂಬುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮಿತ್ರ ಪಕ್ಷವಾಗಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮತ್ತು ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಒಂದು ದಿನದ ನಂತರ ವೇಣುಗೋಪಾಲ್ ಈ  ಹೇಳಿಕೆ ನೀಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *