

ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ.


ಬೆಂಗಳೂರು: ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ಹೊಸ ಅಸ್ತ್ರ ಸಿಕ್ಕಿದಂತಾಗಿದ್ದು, ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.
ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿ ಮುಂದೆ ಈಗ ಪೂಲೀಸರೇ ಸೈಲೆಂಟ್ ಆಗಿದ್ದಾರೆ. ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರಿರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಪ್ರಶ್ನಿಸಿದೆ.


ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೆ? ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಎಂದು ಗೃಹ ಸಚಿವರನ್ನು ಪ್ರಶ್ನಿಸಿರುವ ಕಾಂಗ್ರೆಸ್, ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಸೈಲೆಂಟ್ ಸುನೀಲ , ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ಎಂದು ಕೇಳಿದೆ.
ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು – ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಎಂದು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






