ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು….

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ದು ಹೇಗೆ?: ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು….

ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯನ್ನು  ಸಂಪ್ರದಾಯ ಬದಲಾಗುತ್ತಿದೆ (ರಿವಾಜು ಬದಲಾವಣೆಯಾಗುತ್ತಿದೆ) ಎಂಬ ಘೋಷ ವಾಕ್ಯದಲ್ಲಿ ಎದುರಿಸಿತ್ತು.

: Congress candidate RS Bali being greeted by supporters, celebrating his victory in the Himachal Pradesh Assembly polls, in Nagrota. (Photo | PTI)

ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯನ್ನು  ಸಂಪ್ರದಾಯ ಬದಲಾಗುತ್ತಿದೆ (ರಿವಾಜು ಬದಲಾವಣೆಯಾಗುತ್ತಿದೆ) ಎಂಬ ಘೋಷ ವಾಕ್ಯದಲ್ಲಿ ಎದುರಿಸಿತ್ತು. ಆದರೆ ಅದು ಘೋಷ ವಾಕ್ಯಕ್ಕೆ ಅಷ್ಟೇ ಸೀಮಿತವಾಗಿ ಕಾಂಗ್ರೆಸ್ 5 ವರ್ಷಗಳ ನಂತರ ಅಧಿಕಾರಕ್ಕೇರುತ್ತಿದೆ.

  • ಬಿಜೆಪಿ ಈ ಬಾರಿ ರಾಜ್ಯದಲ್ಲಿ ಚುನಾವಣೆಯನ್ನು ಪ್ರಧಾನಿ ಮೋದಿ ಕೇಂದ್ರಿತವನ್ನಾಗಿಸಿತ್ತು.  ಬಿಜೆಪಿಗೆ ನೀಡುವ ಪ್ರತಿ ಮತ ಮೋದಿಗೇ ಸೇರುತ್ತದೆ ಎಂಬುದು ಚುನಾವಣೆಯಲ್ಲಿ ಬಿಜೆಪಿ ಬಳಸಿದ ಅಸ್ತ್ರವಾಗಿತ್ತು. 
  • ಮತ್ತೊಂದು ಪ್ರಮುಖ ಅಂಶವೆಂದರೆ 1985 ರ ನಂತರ ಹಿಮಾಚಲ ಪ್ರದೇಶದಲ್ಲಿ ಯಾವುದೇ ಪಕ್ಷ ಸತತ 2 ನೇ ಬಾರಿಗೆ ಅಧಿಕಾರಕ್ಕೆ ಬಂದಿಲ್ಲ.
  • ನಿರುದ್ಯೋಗ ಸಮಸ್ಯೆ: ಈ ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಎದುರಿಸುವುದಕ್ಕೆ ನಿರುದ್ಯೋಗ ಸಹ ಪ್ರಮುಖ ಅಂಶವಾಗಿತ್ತು. ಅಕ್ಟೋಬರ್ ವೇಳೆಗೆ ನಿರುದ್ಯೋಗ ಸಮಸ್ಯೆ ಶೇ.8.6 ರಷ್ಟಿತ್ತು. ಹಾಗೂ ಈ ಅಂಕಿ-ಅಂಶ ದೇಶದ ಸರಾಸರಿಗಿಂತಲೂ ಹೆಚ್ಚಾಗಿತ್ತು.
  • ಬಿಜೆಪಿಯ ಅಧಿಕಾರದ ಕನಸನ್ನು ಸುಟ್ಟ ಅಗ್ನಿಪಥ ಯೋಜನೆ:  ಅತಿ ಹೆಚ್ಚು ಪರಮವೀರ ಚಕ್ರ ಪದಕ ಯೋಧರನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ಪಡೆದಿರುವ ಹಿಮಾಚಲ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆ ಬಹಳ ವಿರೋಧ ಎದುರಿಸಿತ್ತು. 

ಕಾಂಗ್ರೆಸ್ ಗೆ ಸಕಾರಾತ್ಮಕವಾದ ಅಂಶಗಳು 

  • ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಭರವಸೆ ನೀಡಿತ್ತು. 
  • ಸೆಬು ಬೆಳೆಗಾರರ ಆಕ್ರೋಶ, ಬಿಜೆಪಿಯ ಬಂಡಾಯ, ಚುನಾವಣೆ ಎದುರಿಸಲು 21 ಮಂದಿ ಹೊರಬಂದಿದ್ದೂ ಆಡಳಿತ ಪಕ್ಷಕ್ಕೆ ಮುಳುವಾಯಿತು. 
  • ಇನ್ನು ಬುಡಕಟ್ಟು ಪ್ರದೇಶಗಳಲ್ಲಿ ಪರಿಸರ ವಿಷಯಗಳು ಹೆಚ್ಚು ಪ್ರಬಲವಾಗಿ ಕೆಲಸ ಮಾಡಿದ್ದು, ಲಾಹೌಲ್ ಮತ್ತು ಸ್ಪಿತಿ ಮತ್ತು ಕಿನ್ನೌರ್ ಗಳಲ್ಲಿ ಹೊಸ ಜಲವಿದ್ಯುತ್ ಯೋಜನೆಗಳು ಮತ್ತು ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನುಷ್ಠಾನದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮತದಾರರನ್ನು ಕೇಳಿಕೊಳ್ಳುತ್ತಿದ್ದರು.
  • ಬುಡಕಟ್ಟು ಜಿಲ್ಲೆಗಳಲ್ಲಿ ಹೊಸ ಜಲವಿದ್ಯುತ್ ಯೋಜನೆಗಳ ವಿರುದ್ಧ ನೋ ಎಂದರೆ ನೋ ಎಂಬ ಅಭಿಯಾನ ನಡೆದಿದ್ದವು. ಬಿಜೆಪಿ ವಿರುದ್ಧ ಜನರ ಅಭಿಪ್ರಾಯ ಒಗ್ಗೂಡುವುದಕ್ಕೆ ಇದೂ ಒಂದು ಕಾರಣವಾಗಿದೆ.
  • ಇದರೊಂದಿಗೆ ಬೆಲೆ ಏರಿಕೆಯಿಂದಲೂ ರೋಸಿ ಹೋಗಿದ್ದ ಜನತೆ ಕಾಂಗ್ರೆಸ್ ಗೆ ಅಧಿಕಾರ ನೀಡಿದ್ದಾರೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *