

ಸಿದ್ದಾಪುರ: ತಾಲೂಕಿನ ಮನಮನೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಜರುಗಿತು.
ಅಧ್ಯಕ್ಷರಾಗಿ ಶಾಂತರಾಮ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಸತ್ಯನಾರಾಯಣ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ತಾಲೂಕಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಸಂತ ನಾಯ್ಕ ಅಭಿನಂದಿಸಿದರು.
