ಬಿ.ಜೆ.ಪಿ.ಯಿಂದ ಕಾಂಗ್ರೆಸ್‌ ಗೆ ಮರಳಲಿದ್ದಾರಾ…ವಲಸಿಗರು?

ಕಾಂಗ್ರೆಸ್ ಸೇರ್ಪಡೆ ವಿಚಾರ ಖಚಿತಪಡಿಸಿದ ಅಡಗೂರು ಎಚ್. ವಿಶ್ವನಾಥ್

ಬಿಜೆಪಿ ಸೇರಿದ್ದ ಪ್ರಮುಖ ಬಂಡಾಯ ನಾಯಕರೊಬ್ಬರು ಕಾಂಗ್ರೆಸ್‌ಗೆ ವಾಪಸ್ಸಾಗುತ್ತಿರುವುದು ಇದೀಗ ಖಚಿತಗೊಂಡಿದ್ದು, ಇತರರ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ.

vishwanath

ಬೆಂಗಳೂರು: ಬಿಜೆಪಿ ಸೇರಿದ್ದ ಪ್ರಮುಖ ಬಂಡಾಯ ನಾಯಕರೊಬ್ಬರು ಕಾಂಗ್ರೆಸ್‌ಗೆ ವಾಪಸ್ಸಾಗುತ್ತಿರುವುದು ಇದೀಗ ಖಚಿತಗೊಂಡಿದ್ದು, ಇತರರ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ.

ಅಡಗೂರು ವಿಶ್ವನಾಥ್ (72) ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಳ್ಳುವುದಾಗಿ ಖಚಿತಪಡಿಸಿದ್ದಾರೆ.

ವಿಶ್ವನಾಥ್ ಅವರು 2019 ರಲ್ಲಿ ಬಿಜೆಪಿ ಸೇರಿದ್ದರು. ಬಿಜೆಪಿ ಸೇರ್ಪಡೆ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳುವಂತೆ ಮಾಡಿ, ಯಡಿಯೂರಪ್ಪ ಮತ್ತೆ ಸಿಎಂ ಆಗಲು ಸಹಾಯ ಮಾಡಿದ್ದರು.

ಬಿಜೆಪಿಗೆ ಬಂದಿದ್ದ ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಕೊಟ್ಟ ಭರವಸೆ ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ವಿಶ್ವನಾಥ್ ಅವರು ಹೇಳಿದ್ದಾರೆ. ಅಲ್ಲದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಕಳೆದ ಬಾರಿ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದ ವಿಜಯಶಂಕರ್‌ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿತ್ತು. ಆದರೆ, ಚುನಾವಣೆ ನಂತರ ಅವರು ಮತ್ತೆ ಬಿಜೆಪಿಗೆ ಮರಳಿದ್ದರು.

ಮೂಲಗಳ ಪ್ರಕಾರ, “ಬಿಜೆಪಿಗೆ ಸೇರ್ಪಡೆಗೊಂಡ ತಂಡದಲ್ಲಿ ವಿಶ್ವನಾಥ್ ಮಾತ್ರವಲ್ಲದೆ, ಮಾಜಿ ಹಾಲಿ ಶಾಸಕ ಪ್ರತಾಪಗೌಡ ಪಾಟೀಲ್ ಕೂಡ ಆ ನಿರ್ಧಾರದಿಂದ ಬೇಸರಗೊಂಡಿದ್ದಾರೆಂದು ತಿಳಿದುಬಂದಿದೆ, ಹಾಗೆಯೇ ಕೇಲವ ಶಾಸಕರ ಸ್ಥಾನ ಪಡೆದುಕೊಂಡಿರುವ ಮಾಜಿ ಸಚಿವ ಆರ್ ಶಂಕರ್ ಅವರು ಕೂಡ ಬೇಸರಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಂಕರ್ ಅವರು, ಕಾದು ನೋಡೋಣ ಏನಾಗುತ್ತದೆ ಎಂದು ಹೇಳಿದ್ದಾರೆ.

ತನಿಖಾ ಅಧಿಕಾರಿಗಳು ತಿಂಗಳ ಹಿಂದೆಯೇ ಕ್ಲೀನ್ ಚಿಟ್ ನೀಡಿದ್ದರೂ ರಮೇಶ್ ಜಾರಕಿಹೊಳಿ ಅವರಿಗೆ ಬಿಜೆಪಿ ಮಂತ್ರಿಗಿರಿ ಸ್ಥಾನ ನೀಡಿಲ್ಲ. ಇದೀಗ 17 ಬಂಡಾಯನಾಯಕರು ಜೊತೆಗೆ ಪರಸ್ಪರ ಸಂಪರ್ಕದಲ್ಲಿದ್ದು, ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂಬುದನ್ನು ಕಾದು ನೋಡಬೇಕಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *