ಡಾಲ್ಫಿನ್ ಜಿಗಿಯುವುದನ್ನು ನೋಡಬೇಕಾ?: ಹಾಗಿದ್ದರೆ ಕಾರವಾರದ ದೇವಬಾಗ್ ಗೆ ಬನ್ನಿ!

ಕರ್ನಾಟಕ ಅರಣ್ಯ ಇಲಾಖೆಯು ಪ್ರವಾಸಿಗರಿಗೆ ಡಾಲ್ಫಿನ್‌ಗಳನ್ನು ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡುವ ವಿಶಿಷ್ಟ ಯೋಜನೆಯನ್ನು ಹೊರತಂದಿದೆ.  

A humpback dolphin breaches near Devbagh in Karwar

ಕಾರವಾರ: ಕರ್ನಾಟಕ ಅರಣ್ಯ ಇಲಾಖೆಯು ಪ್ರವಾಸಿಗರಿಗೆ ಡಾಲ್ಫಿನ್‌ಗಳನ್ನು ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡುವ ವಿಶಿಷ್ಟ ಯೋಜನೆಯನ್ನು ಹೊರತಂದಿದೆ.  

ಕಾರವಾರದ ದೇವಬಾಗ್ ಬಳಿಯ ಕಾಳಿ ನದಿಯಲ್ಲಿ ಡಾಲ್ಫಿನ್ ಜಂಪ್ ನೋಡಬಹುದು. ಪ್ರವಾಸೋದ್ಯಮಇಲಾಖೆಯು  ಸಾಗರ ಮತ್ತು ಕರಾವಳಿ ಪರಿಸರ ವ್ಯವಸ್ಥೆ ಕೋಶದ ಮೂಲಕ, ದೇವಬಾಗ್‌ನಲ್ಲಿನ ಒಂದು ನಿರ್ದಿಷ್ಟ ಸ್ಥಳದಿಂದ ಸಮುದ್ರದಲ್ಲಿರುವ ಡಾಲ್ಫಿನ್ ನೋಡಲು ಅವಕಾಶ ನೀಡಲು ನಿರ್ಧರಿಸಿದೆ, ಈ ಪ್ರಯೋಗ ದೇಶದಲ್ಲೇ ಮೊದಲು ಎನ್ನಲಾಗಿದೆ.

ಡಾಲ್ಫಿನ್‌ಗಳು ಆರೋಗ್ಯಕರ ಪರಿಸರ ವ್ಯವಸ್ಥೆಯ ಸೂಚಕಗಳಾಗಿವೆ. ಅವು ಶುದ್ಧ ನೀರಿನಲ್ಲಿ ಬೆಳೆಯುುತ್ತವೆ ಈ ಪ್ರಸ್ತಾವನೆಯು ಹೊಸದಾಗಿದೆ.

ಸಾಮಾನ್ಯವಾಗಿ, ಜನರು ಕಾಳಿ ನದಿಯ ಸೇತುವೆಯಿಂದ ಡಾಲ್ಫಿನ್‌ಗಳನ್ನು ವೀಕ್ಷಿಸುತ್ತಾರೆ. ನಮ್ಮ ಕರಾವಳಿ ಮತ್ತು ಸಾಗರ ಪರಿಸರ ವ್ಯವಸ್ಥೆ ಕೋಶವು ದೇವಬಾಗ್‌ನಲ್ಲಿ ಡಾಲ್ಫಿನ್‌ಗಳನ್ನು ನೋಡುವ ವೇದಿಕೆಯನ್ನು ನಿರ್ಮಿಸಲು ನಿರ್ಧರಿಸಿದೆ ಎಂದು ಉತ್ತರ ಕನ್ನಡ ಜಿಲ್ಲೆ ಅರಣ್ಯ ಸಂರಕ್ಷಣಾಧಿಕಾರಿ  ವಸಂತ ರೆಡ್ಡಿ ತಿಳಿಸಿದ್ದಾರೆ.

ಸದ್ಯ ದೇವಬಾಗ್ ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಪ್ರವಾಸಿಗರನ್ನು ದೋಣಿಯಲ್ಲಿ ಕರೆದೊಯ್ಯುವ ಮೂಲಕ ಪ್ರತಿದಿನ ಎರಡು ಬಾರಿ ‘ಡಾಲ್ಫಿನ್ ಸಫಾರಿ’ ಆಯೋಜಿಸುತ್ತದೆ. ಆದಾಗ್ಯೂ, ಸ್ಥಳೀಯರು ಡಾಲ್ಫಿನ್‌ಗಳನ್ನು ನೋಡುವುದು ಅವರಿಗೆ ಅಸಾಮಾನ್ಯ ಸಂಗತಿಯಲ್ಲ ಎಂದು ಹೇಳುತ್ತಾರೆ.

ನಾನು ಇಲ್ಲಿ ಡಾಲ್ಫಿನ್‌ಗಳನ್ನು ಅತ್ಯಂತ ಸಮೀಪದಿಂದ ನೋಡಿದ್ದೇನೆ. ಕೆಲವೊಮ್ಮೆ ಗುಂಪುಗಳಲ್ಲಿ ಮತ್ತು ಕೆಲವೊಮ್ಮೆ ಒಂಟಿಯಾಗಿರುತ್ತವೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ  ಸಾಗರ ಜೀವಶಾಸ್ತ್ರ ವಿಭಾಗದ (ಎಂಬಿಡಿ) ವಿದ್ಯಾರ್ಥಿ ಕಿರಣ್ ವಾಸುದೇವಮೂರ್ತಿ ಹೇಳಿದ್ದಾರೆ.

ಹಂಪ್‌ಬ್ಯಾಕ್ ಡಾಲ್ಫಿನ್ ಅನ್ನು ಸಾಮಾನ್ಯವಾಗಿ ನೋಡಬಹುದು ಮತ್ತು ಕೆಲವೊಮ್ಮೆ ಫಿನ್‌ಲೆಸ್ ಪೋರ್ಪೊಯಿಸ್ ಅನ್ನು ಕಾಣಬಹುದು. ಎರಡೂ ಆಳವಿಲ್ಲದ ನೀರಿನಲ್ಲಿ ಬೆಳೆಯುತ್ತವೆ ಎಂದು ಇನ್ನೋರ್ವ ಸಂಶೋಧಕ ಸೂರಜ್ ಎಸ್ ಪೂಜಾರ್ ತಿಳಿಸಿದ್ದಾರೆ.

ಪ್ಯಾನ್-ಟ್ರಾಪಿಕಲ್ ಸ್ಪಾಟೆಡ್ ಡಾಲ್ಫಿನ್ ಮತ್ತು ಸ್ಪಿನ್ನರ್ ಡಾಲ್ಫಿನ್‌ನಂತಹ ಕೆಲವು ಅಪರೂಪದ ತಳಿಗಳಿವೆ ಎಂದು ಸಹಾಯಕ ಪ್ರೊಫೆಸರ್ ಶಿವಕುಮಾರ ಹರಗಿ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ ಸಿದ್ದಾಪುರದಲ್ಲಿ ಅದೇ ಸೂತ್ರ ಸಾಹೇಬರಿಗೆ ಬಾಯಿಗೆ ಜಾರಿ ಬಿದ್ದ ತುಪ್ಪದಂತಾಗಿದೆ! ಬನ್ನಿ.. ಸಿದ್ದಾಪುರ...

Recommended For You

About the Author: Kanneshwar Naik

Leave a Reply

Your email address will not be published. Required fields are marked *