ತಿರುಪತಿ ವೆಂಕಟೇಶ್ವರ ದೇಗುಲದ ಗರ್ಭಗುಡಿ 6-8 ತಿಂಗಳುಗಳ ಕಾಲ ಬಂದ್?

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ ಮುಖ್ಯ ಗರ್ಭಗುಡಿಯನ್ನು 2023 ರಲ್ಲಿ ಆರರಿಂದ ಎಂಟು ತಿಂಗಳವರೆಗೆ ಮುಚ್ಚುವ ಸಾಧ್ಯತೆಯಿದೆ.

Tirupati Temple

ಹೈದರಾಬಾದ್: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ ಮುಖ್ಯ ಗರ್ಭಗುಡಿಯನ್ನು 2023 ರಲ್ಲಿ ಆರರಿಂದ ಎಂಟು ತಿಂಗಳವರೆಗೆ ಮುಚ್ಚುವ ಸಾಧ್ಯತೆಯಿದೆ.

ತಿರುಮಲದ ಮುಖ್ಯ ಗರ್ಭಗುಡಿ ಮೇಲೆ ಇರುವ ವಿಮಾನ ಆಕೃತಿಯ(ಮೂರು ಅಂತಸ್ತು) ಗೋಪುರ ಆನಂದ ನಿಲಯಕ್ಕೆ ಹೊದಿಸಲಾಗಿದ್ದ ಚಿನ್ನದ ಲೇಪನವನ್ನು ಬದಲಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಟಿ) ನಿರ್ಧರಿಸಿದೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.

ನೂತನ ಚಿನ್ನದ ಲೇಪನ ಕಾರ್ಯ ಪೂರ್ಣಗೊಳ್ಳುವವರೆಗೆ ದೇವಸ್ಥಾನದ ಸಮೀಪ ತಾತ್ಕಾಲಿಕವಾಗಿ ವೆಂಕಟೇಶ್ವರ ವಿಗ್ರಹ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೆಬ್ರುವರಿಯಲ್ಲಿ ಕೆಲಸ ಆರಂಭಗೊಳ್ಳಲಿದ್ದು, ಈ ಚಿನ್ನದ ಲೇಪನದ ಕಾರ್ಯ ಪೂರ್ಣಗೊಳ್ಳಲು ಆರು ತಿಂಗಳು ಬೇಕಾಗಬಹುದು ಎಂದು ಟಿಟಿಡಿ ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬ ರಾವ್ ತಿಳಿಸಿದ್ದಾರೆ.

ಹಾಗಾದರೆ, ಈ ಸಮಯದಲ್ಲಿ ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವುದು ಹೇಗೆ? ಎಂಬ ಪ್ರಶ್ನೆ ಸಹಜ. ಇದಕ್ಕಾಗಿ, ಮುಖ್ಯ ದೇವಾಲಯದ ಪಕ್ಕದಲ್ಲಿ ತಾತ್ಕಾಲಿಕವಾಗಿ ತಿರುಪತಿ ವೆಂಕಟೇಶ್ವರ ದೇವರ ತದ್ರೂಪಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲು ಯೋಜಿಸಲಾಗಿದೆ ಎಂದು ಟಿಟಿಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ ಮೊದಲ ವಾರದಲ್ಲಿ ಟ್ರಸ್ಟ್‌ನ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. “ಆಗಮ ಶಾಸ್ತ್ರ” ಸಲಹೆಗಾರರು (ಆಗಮ ಶಾಸ್ತ್ರವು ದೇವಾಲಯದ ನಿರ್ಮಾಣಗಳು ಮತ್ತು ಆಚರಣೆಗಳ ನಡವಳಿಕೆಯ ಬಗ್ಗೆ ವ್ಯವಹರಿಸುವ ಪುರಾತನ ಗ್ರಂಥವಾಗಿದೆ), ಪುರೋಹಿತರು, ಸಿವಿಲ್ ಎಂಜಿನಿಯರ್‌ಗಳು ಮತ್ತು ಇತರ ತಜ್ಞರೊಂದಿಗೆ ಸುದೀರ್ಘ ಚರ್ಚೆ ಮತ್ತು ಸಮಲೋಚನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆʼʼ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲ ದೇವಾಲಯವನ್ನು ಪುನಃಸ್ಥಾಪಿಸುವವರೆಗೆ, ಎಲ್ಲಾ ದೈನಂದಿನ ಆಚರಣೆಗಳನ್ನು ತಾತ್ಕಾಲಿಕ ದೇವಾಲಯದಲ್ಲಿ ಮಾಡಲಾಗುವುದು ಮತ್ತು ಭಕ್ತರಿಗೆ ದೇವರ ದರ್ಶನವನ್ನು ಇಲ್ಲೇ ಒದಗಿಸಲಾಗುವುದು” ಎಂದು ದೀಕ್ಷಿತುಲು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮೂಲ ದೇವಾಲಯದ ಗರ್ಭಗುಡಿಯೊಳಗೆ ಕೆಲವು ಕಡ್ಡಾಯ ಆಚರಣೆಗಳನ್ನು ನಡೆಸುವುದನ್ನು ಮುಂದುವರಿಸುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.‌ (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *