ಕೋವಿಡ್ ಸೋಂಕಿನಿಂದ ನಲುಗುತ್ತಿರುವ ಚೀನಾ: ಮೌನ ಮುರಿದ ಅಧ್ಯಕ್ಷ ಷಿ ಜಿನ್ಪಿಂಗ್

ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ತಮ್ಮ ದೇಶ ಕೋವಿಡ್ ವಿರುದ್ಧ ಹೋರಾಟದ ಬಗ್ಗೆ ಮೌನ ಮುರಿದಿದ್ದು, ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Chinese President Xi Jinping. (File Photo | AP)

ಬೀಜಿಂಗ್: ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ತಮ್ಮ ದೇಶ ಕೋವಿಡ್ ವಿರುದ್ಧ ಹೋರಾಟದ ಬಗ್ಗೆ ಮೌನ ಮುರಿದಿದ್ದು, ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚೀನಾದಲ್ಲಿ ಮತ್ತೊಮ್ಮೆ ಕೋವಿಡ್ ಸೋಂಕು ತೀವ್ರಗೊಂಡಿದ್ದು ಆಸ್ಪತ್ರೆಗಳು ಭರ್ತಿಯಾಗಿ ಹೆಣಗಳ ರಾಶಿ ಬೀಳುತ್ತಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಒಂದು ಮಿಲಿಯನ್ ಮಂದಿ ಚೀನಾದಲ್ಲಿ ಕೋವಿಡ್ ನಿಂದ ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಚೀನಾದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುವುದು ಕಷ್ಟವಾಗುತ್ತಿದ್ದು ಔಷಧಕ್ಕೆ ಕೊರತೆ ಎದುರಾಗಿದೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ವಿಪರೀತ ಹೆಚ್ಚುತ್ತಿರುವುದರ ಪರಿಣಾಮ ಅಲ್ಲಿನ ಆರೋಗ್ಯ ವ್ಯವಸ್ಥೆ ಕುಸಿಯುತ್ತಿದೆ.

ಚೀನಾದ ಸರ್ಕಾರಿ ಪ್ರಸಾರ ಸಂಸ್ಥೆ ಸಿಸಿಟಿವಿ ಷಿ ಜಿನ್ಪಿಂಗ್ ಅವರ ಹೇಳಿಕೆಯನ್ನು ಪ್ರಕಟಿಸಿದ್ದು, “ಪ್ರಸ್ತುತ ಕೋವಿಡ್-19 ತಡೆ ಹಾಗೂ ನಿಯಂತ್ರಣ ಚೀನಾದಲ್ಲಿ ಹೊಸ ಪರಿಸ್ಥಿತಿ ಹಾಗೂ ಹೊಸ ಟಾಸ್ಕ್ ಗಳನ್ನು ಎದುರುಗೊಳ್ಳುವಂತೆ ಮಾಡಿದೆ. ಹೆಚ್ಚು ಮಂದಿಯನ್ನು ತಲುಪುವ ನಿಟ್ಟಿನಲ್ಲಿ ನಾವು ದೇಶಭಕ್ತಿಯ ಆರೋಗ್ಯ ಅಭಿಯಾನವನ್ನು ಕೈಗೆತ್ತಿಕೊಳ್ಳಬೇಕಿದೆ. ಸಾಂಕ್ರಾಮಿಕ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಮುದಾಯದ ರಕ್ಷಣಾ ಮಾರ್ಗವನ್ನು ಬಲಪಡಿಸುವುದು ಮತ್ತು ಜನರ ಜೀವನ, ಸುರಕ್ಷತೆ ಮತ್ತು ಆರೋಗ್ಯವನ್ನು ಪರಿಣಾಮಕಾರಿಯಾಗಿ ರಕ್ಷಿಸಬೇಕಿದೆ ಎಂದು ಷಿ ಜಿನ್ಪಿಂಗ್ ಹೇಳಿದ್ದಾರೆ. 

ಚೀನಾದಲ್ಲಿ ಆಸ್ಪತ್ರೆಗಳು ಹಾಗೂ ಅಂತ್ಯಕ್ರಿಯೆ ನಡೆಸುವ ಸ್ಥಳಗಳು ಭರ್ತಿಯಾಗುತ್ತಿದ್ದು, ಎದುರಾಗುತ್ತಿರುವ ಕೇಸ್ ಲೋಡ್ ಪ್ರಮಾಣವನ್ನು ನಿಭಾಯಿಸಲು ಸಾಧ್ಯವಾಗದೇ ದಿನನಿತ್ಯ ಕೋವಿಡ್ ಅಂಕಿಅಂಶಗಳನ್ನು ಪ್ರಕಟಿಸುವುದನ್ನು ನಿಲ್ಲಿಸುವುದಾಗಿ ಚೀನಾ ಈಗಾಗಲೇ ಹೇಳಿದೆ.
 
ಚೀನಾ ತನ್ನಲ್ಲಿ ವರದಿಯಾಗುತ್ತಿರುವ ಸೋಂಕನ್ನು ಪತ್ತೆ ಮಾಡುವುದೇ ಅಸಾಧ್ಯವಾಗುತ್ತಿದೆ ಅಂತಹ ಒತ್ತಡದ ಪರಿಸ್ಥಿತಿಯಲ್ಲಿ ದೇಶ ಇರುವುದನ್ನು ಒಪ್ಪಿಕೊಂಡಿದೆ. ಚೀನಾದಲ್ಲಿ ಚಳಿಗಾಲವೂ ಕೋವಿಡ್ ಏರಿಕೆಗೆ ಒಂದು ಕಾರಣವಾಗಿದ್ದು, ಹೊಸ ವರ್ಷಾಚರಣೆಗೆ ಮುಂದಿನ ತಿಂಗಳು ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುವುದು ಕೋವಿಡ್ ಸೋಂಕು ಮತ್ತಷ್ಟು ಉಲ್ಭಣಿಸುವ ಭೀತಿಯನ್ನು ಹೆಚ್ಚಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *