ಬಿಜೆಪಿ ಸರ್ಕಾರದ ಸಾಧನೆ ತಿಳಿಸಲು ಸೂಚನೆ

ಸಿದ್ದಾಪುರ: ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆಯು ಪಟ್ಟಣದ ಬಾಲಭವನದಲ್ಲಿ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು.

ಈ ವೇಳೆ ಮಂಡಲದ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು ಮಾತನಾಡಿ, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು, ಈ ಮೂಲಕ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ನಮ್ಮ ಕಾರ್ಯಕರ್ತರು ಈ ಯೋಜನೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ ಮಾಡಬೇಕಾಗಿದೆ. ಒಂದೊಮ್ಮೆ ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ನಾವು ವಿಫಲರಾದಲ್ಲಿ ಅದನ್ನು ಕಾಂಗ್ರೆಸ್ ಪಕ್ಷ ತಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಯೋಜನೆ ಎಂದು ಪುಕ್ಕಟೆ ಪ್ರಚಾರವನ್ನು ಗಿಟ್ಟಿಸಿಕೊಳ್ಳುತ್ತವೆ. ಪ್ರತಿಯೊಂದು ಕುಟುಂಬವೂ ಒಂದಲ್ಲ ಒಂದು ರೀತಿಯಲ್ಲಿ ನಮ್ಮ ಸರ್ಕಾರದ ಯೋಜನೆಯ ಫಲಾನುಭವಿಗಳಿದ್ದು ಅದನ್ನು ತಿಳಿಸುವಂತಹ ಕಾರ್ಯ ನಮ್ಮಿಂದ ನಡೆಯಬೇಕು ಎಂದು ಅವರು ಹೇಳಿದರು.

ಮಂಡಲ ಪ್ರಭಾರಿ ಕುಮಾರ ಮಾರ್ಕಾಂಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ ಬೂತ್ ವಿಜಯ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮನೆ-ಮನೆ ಸಂಪರ್ಕ ಅಭಿಯಾನದ ಕುರಿತು ಮಾಹಿತಿ ನೀಡಿದರು. ಸರಳ್ ಆ್ಯಪ್ ಬಗ್ಗೆ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಮಿತಿ ಸದಸ್ಯ ವಿನಾಯಕ ಹೆಗಡೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಕಡಕೇರಿ, ಜಿಲ್ಲಾ ವಿಶೇಷ ಆಹ್ವಾನಿತ ಗುರುರಾಜ ಶಾನಭಾಗ, ಮಂಡಲ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಮೇಸ್ತ, ಪಟ್ಟಣ ಪಂಚಾಯತ ಸದಸ್ಯರು, ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಪ್ರಮುಖರು, ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಹೆಗಡೆ ಸ್ವಾಗತಿಸಿದರು. ಮಹಾಬಲೇಶ್ವರ ಹೆಗಡೆ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *