

ಸಿದ್ದಾಪುರ: ಬಿಜೆಪಿ ಪಕ್ಷ ಉಳಿದೆಲ್ಲ ಪಕ್ಷಗಳಿಗಿಂತ ಭಿನ್ನವಾಗಿದ್ದು, ನಾವು ಬೂತ್, ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಆಧಾರದಲ್ಲಿ ಪ್ರತೀ ಚುನಾವಣೆಯ ಸಂದರ್ಭದಲ್ಲಿ ಪಕ್ಷವನ್ನು ಬಲಪಡಿಸುತ್ತಾ ಬಂದಿದ್ದು, ಮುಂಬರುವ ವಿಧಾನಸಭೆ ಚುನಾವಣೆ ಸಹ ಇದೆ ಆಧಾರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಸಹ ಪ್ರಭಾರಿ ಪ್ರಸನ್ನ ಕೆರೆಕೈ ಹೇಳಿದರು.


ಅವರು ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ಬೂತ್ ವಿಜಯ ಅಭಿಯಾನಕ್ಕೆ ಪಟ್ಟಣದ ರವೀಂದ್ರ ನಗರದ ಬೂತ್ ಸಂಖ್ಯೆ 213 ರಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದರು. ವಿಧಾನ ಸಭೆ ಚುನಾವಣೆ ಏಪ್ರಿಲ್ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ನಮಗೆ ಚುನಾವಣೆ ಎದುರಿಸಲು ನಮ್ಮ ವಯಕ್ತಿಕ ಕೆಲಸಗಳ ಹೊರತಾಗಿ ಉಳಿದಿರುವುದು ಕೇವಲ 750 ಗಂಟೆಗಳಷ್ಟೆ ಬಾಕಿಯಿದ್ದು ಈ ಅತ್ಯಲ್ಪ ಸಮಯದಲ್ಲಿ ನಾವು ಏನೆಲ್ಲ ಕೆಲಸಗಳನ್ನು ಮಾಡಿ ಅಲ್ಲಿ ಬದಲಾವಣೆ ತರಲು ಸಾಧ್ಯವಿದೆ. ಒಟ್ಟಾರೆ ಯಶಸ್ವಿ ಸಂಪರ್ಕ ಜಾಲವನ್ನು ಹೇಗೆ ವಿಸ್ತಾರ ಮಾಡಲು ಸಾಧ್ಯವಿದೆ ಎನ್ನುವ ಸಂಗತಿ ಯ ನ್ನು ಗಮನದಲ್ಲಿ ಇಟ್ಟುಕೊಂಡು ಈ ಬೂತ್ ವಿಜಯ ಅಭಿಯಾನವನ್ನು ರಾಜ್ಯಾದ್ಯಂತ ಜ. 2 ರಿಂದ 10 ರವರೆಗೆ ಆಯೋಜಿಸಲಾಗಿದೆ.

ಈ ಅಭಿಯಾನದಲ್ಲಿ ಪ್ರಮುಖವಾಗಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಬೂತ್ ಸಮಿತಿ ಹಾಗೂ ಪೇಜ್ ಪ್ರಮುಖರನ್ನು ನೇಮಿಸಿ ಅವರಿಗೆ ಮತದಾರರ ವಿಶ್ವಾಸವನ್ನು ಗಳಿಸುವ ಕೆಲಸವನ್ನು ನೀಡಬೇಕು. ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಕಾರ್ಯಕ್ರಮ ನಡೆಸಬೇಕು, ಬೂತ್ ಮಟ್ಟದಲ್ಲಿ ವಾಟ್ಸಾಪ್ ಗ್ರೂಪ್ ರಚಿಸಿ ಸಾರ್ವಜನಿಕರಿಗೆ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. ಬೂತ್ ಮಟ್ಟದಲ್ಲಿ ಪ್ರತೀ ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಿಸುವ ಮೂಲಕ ಈ ಅಭಿಯಾನವು ಯಶಸ್ವಿಯಾಗಿ ಮಾಡಬೇಕೆಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ಜಿಲ್ಲಾ ವಿಶೇಷ ಆಹ್ವಾನಿತ ಗುರುರಾಜ ಶಾನಭಾಗ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಕೆ.ಮೇಸ್ತ, ಪ್ರಸನ್ನ ಹೆಗಡೆ, ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಕಡಕೇರಿ, ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ್ ನಾಯ್ಕ, ಪಟ್ಟಣ ಪಂಚಾಯತ ಸದಸ್ಯ ನಂದನ್ ಬೋರ್ಕರ್, ನಾಮ ನಿರ್ದೇಶಿತ ಸದಸ್ಯರಾದ ಸುರೇಶ್ ನಾಯ್ಕ ಬಾಲಿಕೊಪ್ಪ, ಮಂಜುನಾಥ್ ಭಟ್, ಶಕ್ತಿಕೇಂದ್ರ ಪ್ರಮುಖ ಸುರೇಶ್ ನಾಯ್ಕ ಪ್ರಮುಖರಾದ ಆದರ್ಶ ಪೈ ಬಿಳಗಿ, ವಿಜಯ ಹೆಗಡೆ ಉಳಿದಂತೆ ಬೂತ್ ಕಮಿಟಿ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಜರಿದ್ದರು.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
