

ಯಶಸ್ವಿನಿ ವಿಮೆ ಯೋಜನೆಯ ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆ – ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಜ.31ರವರೆಗೆ ಅವಕಾಶ.

ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ, ನವೆಂಬರ್ 1 ರಿಂದ ನೋಂದಣಿ ಆರಂಭ
ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.




ಬೆಂಗಳೂರು: ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ.
ಯಶಸ್ವಿನಿ ಯೋಜನೆಗಾಗಿ ರೈತರು ಹಾಗೂ ಸಹಕಾರಿ ಸಂಘಗಳು ಬೇಡಿಕೆ ಮುಂದಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಯಶಸ್ವಿನಿ ಯೋಜನೆ ಅಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸೆ ವೆಚ್ಚ 5 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ. 4 ಸದಸ್ಯರ ಕುಟುಂಬಕ್ಕೆ ವರ್ಷಕ್ಕೆ 500 ರೂಪಾಯಿ ವಂತಿಕೆ ಕಟ್ಟಬೇಕಾಗಿದೆ.
ನೊಂದಣಿ ಪ್ರಕ್ರಿಯೆಯನ್ನು ನವೆಂಬರ್ 1, 2022 ರಿಂದ ಪ್ರಾರಂಭವಾಗಲಿದೆ. ಯಶಸ್ವಿ ಯೋಜನೆ ಅವಧಿ 01-01-2023 ರಿಂದ 30-12-2023 ರವರೆಗೂ ಜಾರಿಯಲ್ಲಿರುತ್ತದೆ. 1650 ಖಾಯಿಲೆಗಳಿಗೆ ಈ ಯೋಜನೆ ಅಡಿ ಚಿಕಿತ್ಸೆ ನೀಡಲಾಗುತ್ತದೆ.
ಮಾರ್ಗಸೂಚಿ ಪ್ರಕಾರ, ಸಹಕಾರ ಸಂಘಗಳ ಸದಸ್ಯರು, ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರು, ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು, ಸಹಕಾರಿ ನೇಕಾರರಿಗೆ ಈ ಯೋಜನೆ ಅನ್ವಯವಾಗಲಿದೆ. (ಕಪ್ರಡಾ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
