ಅಂಕೋಲಾದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಅಧಿಕಾರಿ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ: ಪುರಭವನದಲ್ಲಿ ಭಾರೀ ಹೈಡ್ರಾಮಾ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಸೋಮವಾರ ಹೈಡ್ರಾಮಾವೇ ನಡೆಯಿತು.

Police detain a Congress worker for protesting against the release of BJP’s book on Siddaramaiah at Town Hall in Bengaluru on Monday.

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಸೋಮವಾರ ಹೈಡ್ರಾಮಾವೇ ನಡೆಯಿತು.

ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು, ನ್ಯಾಯಾಲಯದ ಮೊರೆ ಹೋಗಿ ಪುಸ್ತಕ ಬಿಡುಗಡೆಗೆ ತಡೆ ನೀಡುವಂತೆ ಮನವಿ ಮಾಡಿದ್ದರು.

ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್‌ ಕೋರ್ಟ್‌ ಪುಸ್ತಕ ಬಿಡುಗಡೆಗೆ ತಡೆ ನೀಡಿತು. ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ ಕೋರ್ಟ್‌ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿತು.

ನ್ಯಾಯಾಲಯ ತಡೆ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕಾ? ಬೇಡವೇ ಎಂಬುದರ ಬಗ್ಗೆ ಆಯೋಜಕರ ನಡುವೆ ಗೊಂದಲ ಎದುರಾಗಿತ್ತು.

ಈ ನಡುವೆ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಪುರಭವನದ ಎದುರು ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಸೇರಿ, ಪ್ರತಿಭಟನೆ ಆರಂಭಿಸಿದರು. ಕೆಲವರು ಪುರಭವನದ ಒಳಗಡೆ ನುಗ್ಗಿದ್ದರು. ಹೀಗಾಗಿ ಒಳಗಡೆ ಭಾರೀ ಹೈಡ್ರಾಮಾವೇ ನಡೆಯಿತು. ಪ್ರತಿಭಟನಾನಿರತರಾಗಿದ್ದ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ನಂತರ ಆಯೋಜಕರು ಇಂದಿನ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ರದ್ದು ಮಾಡುತ್ತೇವೆ ಎಂದು ವೇದಿಕೆ ಮೇಲೆ ಪ್ರಕಟಿಸಿದರು.

ಕಾರ್ಯಕ್ರಮಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ಅವರು ಆಗಮಿಸಬೇಕಿತ್ತು. ಆದರೆ, ಕಾರಣಾಂತರಗಳಿಂದ ಅವರು ಆಗಮಿಸಿರಲಿಲ್ಲ. ಆದರೆ, ಆದರೆ ಮುಖ್ಯ ಅತಿಥಿಯಾಗಿ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಚಲವಾದಿ ನಾರಾಯಣಸ್ವಾಮಿ, ಲೇಖಕರಾದ ರೋಹಿತ್ ಚಕ್ರತೀರ್ಥ, ಸಂತೋಷ್ ತಮ್ಮಯ್ಯ, ವೃಶಾಂಕ್ ಭಟ್ ಮತ್ತು ರಾಕೇಶ್ ಶೆಟ್ಟಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಪುಸ್ತಕವನ್ನು ಸಮರ್ಥಿಸಿಕೊಂಡ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು, ಬಿಜೆಪಿಯವರು ಧರ್ಮ ಮತ್ತು ಜಾತಿಗಳ ಆಧಾರದ ಮೇಲೆ ಜನರನ್ನು ಒಡೆಯಲು ಯತ್ನ ನಡೆಸುತ್ತಿದ್ದಾರೆಂದು ಸಿದ್ದರಾಮಯ್ಯ ಅವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಿಂದೂ ಮತ್ತು ಹಿಂದುತ್ವ ಒಂದೇ ಎಂಬುದನ್ನು ಅವರು ಅರಿತುಕೊಳ್ಳಬೇಕು ಎಂದು ಹೇಳಿದರು.

ಈ ನಡುವೆ ತಮ್ಮ ಕುರಿತಾದ ಪುಸ್ತಕ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ನನ್ನ ತೇಜೋವಧೆ ಮಾಡುವ ಉದ್ದೇಶದಿಂದ ಬಿಜೆಪಿ ‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕ ಬರೆದಿದ್ದು, ಇದು ಸಂಪೂರ್ಣ ಮಾನಹಾನಿಕರವಾಗಿದೆ. ಈ ಪುಸ್ತಕದ ವಿರುದ್ಧ ಕಾನೂನು ಕ್ರಮಕ್ಕೆ ಚಿಂತನೆ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಅಧಿಕಾರಿ – 15 ಸಾವಿರ ಲಂಚ ಸ್ವೀಕರಿಸುವಾಗ ವಶಕ್ಕೆ – ಕೆಲ ದಿನಗಳ ಹಿಂದಷ್ಟೇ ಪದೋನ್ನತಿ ಹೊಂದಿ ಅಂಕೋಲಾಕ್ಕೆ ವರ್ಗಾವಣೆಗೊಂಡಿದ್ದ ಆರೋಪಿ.

ಏರ್ಪೋರ್ಟ್​​ನಲ್ಲೇ 54 ಪ್ರಯಾಣಿಕರು ಬಾಕಿ, ವಿಮಾನ ಟೇಕ್‌ ಆಫ್‌: ಏರ್ಲೈನ್ಸ್ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಆಕ್ರೋಶ

ಏರ್ಲೈನ್ಸ್ ಸಿಬ್ಬಂದಿಯ ನಿರ್ಲಕ್ಷ್ಯದಿಂದ 54 ಪ್ರಯಾಣಿಕರನ್ನು ಬಿಟ್ಟು ವಿಮಾನ ಟೇಕ್ ಆಫ್ ಆಗಿದ್ದ ಘಟನೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *