ಪಹಣಿ ಪತ್ರದ ಶುಲ್ಕ ಏರಿಕೆ ರೈತ ಸಂಘದ ಮನವಿ

ಸಿದ್ದಾಪುರ: ತಹಶೀಲ್ದಾರ ಕಚೇರಿಯಿಂದ ರೈತರಿಗೆ ಪೂರೈಸುತ್ತಿರುವ ಪಹಣಿ ಪತ್ರಿಕೆಗೆ ರೂ. 25 ನ್ನು ವಸೂಲಿ ಮಾಡುತ್ತಿದ್ದು, ಅದನ್ನು ಕಡಿಮೆ ಮಾಡುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಕೆರಿಯಪ್ಪ ನಾಯ್ಕ ಮಾತನಾಡಿ, ಈ ಮೊದಲು ತಹಶೀಲ್ದಾರ ಕಛೇರಿಯಲ್ಲಿ ನೀಡುವ ರೈತರ ಪಹಣಿ ಪತ್ರಿಕೆಗೆ ಒಂದು ಸರ್ವೆ ನಂಬರಕ್ಕೆ 15ರು ಗಳನ್ನು ಪಡೆಯುತ್ತಿದ್ದು, ಆದರೆ ಸರಕಾರದವರು ರೈತರ ಗಮನಕ್ಕೆ ತರದೆ ಪಹಣಿ ಪತ್ರಿಕೆಯ ಶುಲ್ಕವನ್ನು ಹೆಚ್ಚಿಸಿದ್ದಾರೆ. ಈಗ ನೆಮ್ಮದಿ ಕೇಂದ್ರದಲ್ಲಿ ಒಂದು ಪಹಣಿಗೆ ರೂ. 25/- ನೀಡಿ ಪಡೆಯಬೇಕಾಗಿದೆ. ಈ ಮೊದಲು ಗಣಕೀಕೃತ ಪಹಣಿ ಪತ್ರ ಬಂದಾಗ ಒಂದು ಪಹಣಿ ಪತ್ರಿಕೆಗೆ ರೂ. 5 ಪಡೆಯುತ್ತಿದ್ದರು . ಈ ಹಿಂದೆ ಪಡೆಯುತ್ತಿದ್ದಂತೆ ಐದು ರೂಪಾಯಿ ಪಡೆದು ಪಹಣಿ ಪತ್ರಿಕೆ ವಿತರಿಸುವಂತೆ ಆಗ್ರಹಿಸಿದರು.


ರೈತರನ್ನು ಹತ್ತಿಕ್ಕು ವ ಕೆಲಸ ಸರ್ಕಾರದಿಂದ ನಡೆಯುತ್ತಿದ್ದು ಅದನ್ನು ತಕ್ಷಣ ನಿಲ್ಲಿಸಬೇಕು. ರೈತರ ಒಂದು ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಹತ್ತು ಸಲ ಓಡಾಡಿಸುವುದು ಬಂದಾಗಬೇಕು. ರೈತರಿಗೆ ದಿನ ನಿತ್ಯದ ಹಾಗೂ ಸಂಘ ಸಂಸ್ಥೆಗಳ ವ್ಯವಹಾರಕ್ಕೆ ಪಹಣಿ ಪತ್ರಿಕೆ ಬೇಕಾಗಿದ್ದು, ಎಲ್ಲಾ ಸಂಸ್ಥೆಯವರು ಮೂಲ ಪಹಣಿಯನ್ನೇ ತೆಗೆಸಿ ನೀಡಲು ಆಗ್ರಹ ಮಾಡುತ್ತಿದ್ದು, ಇದರಿಂದ ಕೇವಲ ಒಂದು ಗುಂಟೆ, ಎರಡು ಗುಂಟೆ ಇರುವ ಅತಿ ಸಣ್ಣ ರೈತರು ಪದೇ ಪದೇ ಪಹಣಿಯನ್ನು ತೆಗೆಸಬೇಕಾಗಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸದ್ದಿಲ್ಲದೇ ಸುಲಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಸರಕಾರದ ನೆಮ್ಮದಿ ಕೇಂದ್ರದಲ್ಲಿ ನೀಡುತ್ತಿರುವ ಪಹಣಿಗೆ ವಿಧಿಸುತ್ತಿರುವ ರೂ. 25/- ಕೂಡಲೇ ಕಡಿಮೆ ಮಾಡಿ ಅದನ್ನು ರೂ. 5ಕ್ಕೆ ಇಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸುತ್ತೇವೆ. ಇಲ್ಲದಿದ್ದಲ್ಲಿ ರೈತರ ಪರವಾಗಿ ಬೃಹತ್‌ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *