

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ, ಗೂಳಿ ತಿವಿದು ಇಬ್ಬರ ದುರ್ಮರಣ
ಶಿವಮೊಗ್ಗದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ದುರ್ಮರಣ ಹೊಂದಿದ್ದಾರೆ.


ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ದುರ್ಮರಣ ಹೊಂದಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅವಘಡಗಳಲ್ಲಿ ಈ ಅನಾಹುತ ಸಂಭವಿಸಿದೆ. ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ನಡೆದಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ರಂಗನಾಥ್ ಎಂಬವರು ಮೃತಪಟ್ಟಿದ್ದಾರೆ. ಸ್ಪರ್ಧೆ ನೋಡಲು ಹೋಗಿದ್ದಾಗ ಹೋರಿ ತಿವಿದು ಮೃತಪಟ್ಟಿದ್ದಾರೆ. ಅಲ್ಲದೆ ಮಾಳೂರಿನಲ್ಲಿ ಇನ್ನೂ ಇಬ್ಬರಿಗೆ ಗಾಯಗಳಾಗಿವೆ.


ಇದೇ ವೇಳೆ ಶಿವಮೊಗ್ಗ ತಾಲೂಕಿನ ಕೊನಗನವಳ್ಳಿ, ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ಅಲ್ಕೊಳ ನಿವಾಸಿ 32 ವರ್ಷದ ಲೋಕೇಶ್ ಮೃತಪಟ್ಟಿದ್ದಾರೆ. ಹೋರಿ ತಿವಿತದಿಂದ ಗಾಯಗೊಂಡಿದ್ದ ಆಟೋ ಚಾಲಕರಾಗಿದ್ದ ಲೋಕೇಶ್ ಆವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






