

ಸಿದ್ದಾಪುರ: ಜನವರಿ ೨೯ ರಂದು ಜರುಗಲಿರುವ ತಾಲೂಕಾ ೬ನೇ ಕನ್ನಡ ಸಾಹಿತ್ಯ ಸಮ್ಮೆಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಸಂಜೆ ತಾಲೂಕಾ ಪಂಚಾಯ್ತಿ ಸಭಾಭವನದಲ್ಲಿ ಜರುಗಿತು.
ಪಟ್ಟಣ ಪಂಚಾಯತ ಸದಸ್ಯ ನಂದನ ಬೋರಕರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ತಾಲೂಕಾ ಕಸಾಪ ಅಧ್ಯಕ್ಷ ಗೋಪಾಲ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ತಾಲೂಕಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರಾವ್, ಕಸಾಪ ನಿಕಟಪೂರ್ವ ಅಧ್ಯಕ್ಷ ನಾಗರಾಜ ಮಾಳ್ಕೋಡ, ಕೋಶಾಧ್ಯಕ್ಷ ಪಿ.ಬಿ.ಹೊಸೂರ, ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ ಉಪಸ್ಥಿತರಿದ್ದರು. ಕಸಾಪ ಮಾಜಿ ಅಧ್ಯಕ್ಷ ಎಂ.ಕೆ.ನಾಯ್ಕ ಹೊಸಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಅಣ್ಣಪ್ಪ ನಾಯ್ಕ ಶಿರಳಗಿ ಕಾರ್ಯಕ್ರಮ ನಿರೂಪಿಸಿದರು.

