ಕನ್ನಡದ ಖ್ಯಾತ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ

ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

K.V thirumalesh

ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

ಅಲ್ಪಕಾಲದ ಅಸೌಖ್ಯದಿಂದ ಅವರು ಬಳಲಿದ್ದರು. ಹೃದಯ ಕಾಯಿಲೆ ಹೊಂದಿದ್ದ ಅವರಿಗೆ ಇತ್ತೀಚೆಗೆ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಕಳೆದ ವಾರದವರೆಗೂ ಆಸ್ಪತ್ರೆಯಲ್ಲಿದ್ದ ಅವರು ನಿನ್ನೆ ಡಿಸ್‌ಚಾರ್ಜ್‌ ಆಗಿ ಮನೆಗೆ ಬಂದಿದ್ದರು. ಅವರಿಗೆ ಪತ್ನಿ, ಮೂವರು ಹೆಣ್ಣುಮಕ್ಕಳಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ಕೆ.ವಿ. ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕ. ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಆಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದು ನಿವೃತ್ತಿ ಹೊಂದಿದ್ದರು.

ಅಕ್ಷಯ ಕಾವ್ಯ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ತಿರುಮಲೇಶ್ ಅವರು ವಠಾರ ಸಂಕಲನದ ಮೂಲಕ ಕಾವ್ಯ ಕ್ಷೇತ್ರ ಪ್ರವೇಶಿಸಿದರು. ನಂತರ ಒಂಬತ್ತು ಕವನ ಸಂಕಲನ ಪ್ರಕಟಿಸಿದ್ದಾರೆ. ತಿರುಮಲೇಶ್ ಅವರ ಆಯ್ದ ಕವಿತೆಗಳನ್ನು ಈ ಸಂಕಲನ ಒಳಗೊಂಡಿದೆ. ಕಾವ್ಯ, ಕತೆ, ಕಾದಂಬರಿ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕೆಲಸ ಮಾಡಿರುವ ಕೆ.ವಿ. ತಿರುಮಲೇಶ್ ಸಾಹಿತ್ಯ ವಿಮರ್ಶೆ ಮತ್ತು ಭಾಷಾ ವಿಜ್ಞಾನ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದವರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ರಾಜೀವ್ ಮೈದಾನಉಳಿಸಲು ಸೂಚನೆ

ಸಿದ್ಧಾಪುರ ‘ರಾಜೀವ ಮೈದಾನ’ ಉಳಿಸಲು ಗ್ರಾಮಸ್ಥರ ಆಗ್ರಹ; ಕ್ರೀಡೆಗೆ ಹೊರತುಪಡಿಸಿ ಅನ್ಯ ಚಟುವಟಿಕೆಗೆ ನೀಡದಂತೆ ಶಿರಸಿ ಉಪವಿಭಾಗಾಧಿಕಾರಿ ಸೂಚನೆ ​ತಾಲೂಕಿನ ಬೇಡ್ಕಣಿ ಗ್ರಾಮದಲ್ಲಿರುವ ಏಕೈಕ...

ತ್ಯಾರಸಿ ಯುವತಿಗೆ ಬಂಗಾರದ ಪದಕ

ಸಿದ್ದಾಪುರ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಸಿದ್ದಾಪುರ ತಾಲೂಕಿನ ತ್ಯಾರ್ಸಿಯ ರಚನಾ ಪ್ರಕಾಶ ಗೌಡರ್ ರಾಜ್ಯದ ರಾಜ್ಯಪಾಲರಿಂದ ಬಂಗಾರದ( ಗೋಲ್ಡ್ ಮೆಡಲ್...

ಸಹಕಾರಿ ಸೇರಿದಂತೆ…. ನಾನಾ ಕ್ಷೇತ್ರಗಳ ಕೀಲಿಕೈ ಕಳ್ಳನ ಕೈ ಸೇರಿದರೆ ಅಪಾಯ!!!

ಕನ್ನ ಹಾಕಿದವರಿಗಿಂತ ಕಾವಲು ನಿಂತು ಕಣ್ಣುಮುಚ್ಚಿದವನೇ ಪ್ರಧಾನ ಆರೋಪಿ!?(ಸಹಕಾರಿ ರಂಗದ ರಕ್ಷಾ ಕವಚವಾದ ಸನ್ನದು ಲೆಕ್ಕಪರಿಶೋಧಕರ ನೈತಿಕ ಅಧಃಪತನದ ಕರಾಳ ದರ್ಶನ) “ಭಾರತೀಯ ಸಂಸ್ಕೃತಿಯಲ್ಲಿ...

namdhari-issue- part-01 – ಚರಿತ್ರೆಯಿಂದ ಪಾಠ ಕಲಿಯಿರಿ… ವಿವೇಕದಿಂದ ಮುಂದುವರಿಯಿರಿ….

ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘ ಯಾನೆ ದೀವರ ಸಂಘದ ವಿಚಾರ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಇದು ಒಂದು ಸಮೂದಾಯದ ಅದರಲ್ಲೂ ಹಿಂದುಳಿದ ವರ್ಗದ...

Latest Posts

Recommended For You

About the Author: Kanneshwar Naik

Leave a Reply

Your email address will not be published. Required fields are marked *