ಫೆ.೩& ೪ ಜಾನಪದ ಕಲೋತ್ಸವ ಮತ್ತು ರಜತ ಮಹೋತ್ಸವ


ಸಿದ್ದಾಪುರ
ಆಶಾ ಕಿರಣ ಟ್ರಸ್ಟ ರಜತ ಮಹೋತ್ಸವ ಹಾಗೂ ಜಾನಪದ ಕಲೋತ್ಸವ ಫೆ.೩ ಮತ್ತು ೪ರಂದು ಜಗದ್ಗುರು ಮುರುಘರಾಜೇಂದ್ರ ಅಂಧ ಮಕ್ಕಳ ಶಾಲೆಯಲ್ಲಿ ಜರುಗಲಿದೆ ಎಂದು ಆಶಾಕಿರಣ ಟ್ರಸ್ಟ ಅಧ್ಯಕ್ಷ ಡಾ|ರವಿ ಹೆಗಡೆ ಹೂವಿನಮನೆ ತಿಳಿಸಿದರು.


ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ ಫೆ.೩ರಂದು ಬೆಳಿಗ್ಗೆ ೧೦.೪೫ಕ್ಕೆ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು ಆಶಾಕಿರಣ ಟ್ರಸ್ಟನ ಬೆಳ್ಳಿಹಬ್ಬದ ಸಂಸ್ಮರಣಾ ಭವನದ ಶಂಕುಸ್ಥಾಪನೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೆರವೇರಿಸುವರು. ಜಾನಪದ ಕಲೋತ್ಸವವನ್ನು ಸಚಿವ ಸುನೀಲಕುಮಾರ ಉದ್ಘಾಟಿಸುವರು. ದಿ|ಅರವಿಂದ ಪಿತ್ರೆ ಫೋಟೊದ ಅನಾವರಣವನ್ನು ಪ್ರಸಿದ್ಧ ನಟ ಶ್ರೀನಾಥ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಖ್ಯಾತ ಕವಿ ಬಿ.ಆರ್.ಲಕ್ಷ್ಮಣರಾವ್, ಪ್ರಸಿದ್ಧ ಚಲನಚಿತ್ರ ನಟ ನಿರ್ನಳ್ಳಿ ರಾಮಕೃಷ್ಣ ಪಾಲ್ಗೊಳ್ಳಲಿದ್ದು ಟ್ರಸ್ಟನ ಅಧ್ಯಕ್ಷ ಡಾ|ರವಿ ಹೆಗಡೆ ಹೂವಿನಮನೆ ಅಧ್ಯಕ್ಷತೆವಹಿಸುವರು. ಮಧ್ಯಾಹ್ನ ೩ರಿಂದ ಯಕ್ಷ ತರಂಗಿಣಿ ಕಲಾಸಂಘದಿಂದ ಮಕ್ಕಳ ಯಕ್ಷಗಾನ, ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಕವಿ ಬಿ.ಆರ್.ಲಕ್ಷö್ಮಣರಾವ್, ಸ್ಥಳೀಯ ಜೆ.ಎಂ.ಎಪ್.ಸಿ.ನ್ಯಾಯಾಧೀಶ ತಿಮ್ಮಯ್ಯ ಜಿ.ಪಾಲ್ಗೊಳ್ಳುವರು.


ಫೆ.೪ರ ಸಂಜೆ ೪.೩೦ಕ್ಕೆ ಶಿರಳಗಿ ಶ್ರೀ ಬ್ರಹ್ಮಾನಂದ ಭಾರತೀ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಮುಕ್ತಾಯ ಸಮಾರಂಭ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಉದ್ಯಮಿ ಮುರಳಿಧರ ಪ್ರಭು ಕುಮಟಾ, ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ ಪಾಲ್ಗೊಳ್ಳಲಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ| ರಾಮಚಂದ್ರ ಕೆ. ಗೌರವ ಉಪಸ್ಥಿತರಿರುವರು. ಅಧ್ಯಕ್ಷತೆಯನ್ನು ಡಾ|ರವಿ ಹೆಗಡೆ ಹೂವಿನಮನೆ ವಹಿಸುವರು ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗದ ಅಂಧ ಶಾಲಾ ಮಕ್ಕಳ ಜಾನಪದ ಕಲಾ ಸ್ಪರ್ಧೆ, ವಿವಿಧ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮಗಳು,ಸಂಗೀತ, ಯಕ್ಷಗಾನ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಟ್ರಸ್ಟಿನ ಉಪಾಧ್ಯಕ್ಷ ಸಿ.ಎಸ್.ಗೌಡರ್, ಪದಾಧಿಕಾರಿಗಳಾದ ವಾಸುದೇವ ಶೇಟ್, ಜಿ.ಜಿ.ಹೆಗಡೆ,ಉಮಾ ಉದಯ ನಾಯಕ, ಸುಧೀರ ಬೆಂಗ್ರೆ ಇದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ. ಸೂರಜ್ ರೇವಣ್ಣ ಹಾಸನ: ಅಸಹಜ ಲೈಂಗಿಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *