ಎಂ. ಜಿ. ನಾಯ್ಕ ರಿಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ


ಸಿದ್ದಾಪುರ: ೫: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ಮೈಸೂರು ರಾಜ್ಯದ ನಿಕಟ ಪೂರ್ವ ಸಿ.ಆರ್.ಪಿ ಗಳಿಗೆ ನೀಡುವ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಸಿದ್ದಾಪುರ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಮಂಜುನಾಥ ಜಿ. ನಾಯ್ಕ ( ಎಮ್.ಜಿ.ನಾಯ್ಕ) ಆಯ್ಕೆಯಾಗಿದ್ದು ಸರಕಾರಿ ಶಾಲಾ ಬಡವಿದ್ಯಾರ್ಥಿಗಳ ಬಗ್ಗೆ ಅವರ ಸಾಮಾಜಿಕ ಕಾಳಜಿ, ಬದ್ಧತೆಯನ್ನು ಅರಸಿಬಂದ ಪ್ರಶಸ್ತಿಯಾಗಿದೆ ಇದು. ಅವರು ಬೆಂಗಳೂರಿನ ಯಲಹಂಕ ದಲ್ಲಿ ರಾಜ್ಯಾಧ್ಯಕ್ಷ ಪಿ. ಮಹೇಶ್ ಅವರ ನೇತೃತ್ವದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.


ಎಮ್.ಜಿ. ನಾಯ್ಕ ಈ ಹಿಂದೆ ಬಿಳಗಿ ಕ್ಲಸ್ಟರ್ ಸಂಪನ್ಮೂಲ ಶಿಕ್ಷಕರಾಗಿದ್ದಾಗ ಎಲ್ಲಾ ಶಾಲೆಗಳ ಶಿಕ್ಷಕರು ,ವಿದ್ಯಾರ್ಥಿಗಳ ಪ್ರೀತಿ ವಿಶ್ವಾಸ ಗೆದ್ದಿದ್ದಲ್ಲದೆ ಕರೋನ ಗೃಹಬಂಧನ ಸಂಕಷ್ಟದ ಸಮಯದಲ್ಲಿ ಎಲ್ಲಾ ಶಾಲೆಗಳ ಶಿಕ್ಷಕರನ್ನು ಆನ್ಲೈನ್ ಮೂಲಕ ಸಂಪರ್ಕಿಸಿ ಮನೆಯಿಂದಲೇ ಶಿಕ್ಷಕರಿಗೆ ಕಲಿಕೋಪಕರಣಗಳ ತಯಾರಿಕಾ ಸ್ಫರ್ಧೆ ಏರ್ಪಡಿಸಿದ ಜಿಲ್ಲೆಯ ಏಕೈಕ ಕ್ಲಸ್ಟರ್ ಎಂದು ಹೆಸರಾಗಿದ್ದರು. ಬಿಳಗಿ ಕ್ಲಸ್ಟರ್ ನ ಯೂಟ್ಯೂಬ್ ಚಾನೆಲ್ ತೆರೆದು ಅದರಲ್ಲಿ ತಮ್ಮ ಕ್ಲಸ್ಟರ್ ಶಿಕ್ಷಕರು ತಯಾರಿಸಿದ ಕಲಿಕಾ ಸಾಮಗ್ರಿಗಳ ವಿಡಿಯೋ ಗಳನ್ನು ಅಪ್ಲೋಡ್ ಮಾಡಿ ಎಲ್ಲರೂ ವೀಕ್ಷಿಸುವಂತೆ ಮಾಡಿದ್ದಾರೆ.

ನಲಿಕಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಸಾವಿರಾರು ಶಿಕ್ಷಕರಿಗೆ ತರಬೇತಿಯನ್ನು ನೀಡಿರುತ್ತಾರೆ. ಇತ್ತೀಚೆಗೆ ಅವರು ತಮ್ಮದೇ ನೇತೃತ್ವದಲ್ಲಿ ತಾಲೂಕಿನ ಆಸಕ್ತ ಶಿಕ್ಷಕರ ನೆರವಿನಿಂದ ‘ಧ್ವನಿ’ ಹೆಸರಿನ ಸ್ವಯಂ ಸೇವಕ ಸಂಘ ತೆರೆದು ತಾಲೂಕಿನ ಅನಾಥ, ಏಕಪಾಲಕ, ಕಡು ಬಡತನದಿಂದ ಬಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಛತ್ರಿ, ಮಾಸಿಕ ಧನಸಹಾಯ ಇತ್ಯಾದಿ ಹತ್ತಾರು ಮಾನವೀಯ ಕಾಯಕದಲ್ಲಿ ತೊಡಗಿದ್ದಾರೆ.
ಇವರ ಮಾನವೀಯ, ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ಇಂದು ದಿನಾಂಕ ೫-೧-೨೦೨೩ ರಂದು ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿರುವುದು ಪ್ರಶಸ್ತಿಯ ಗರಿಮೆಯನ್ನು ಹೆಚ್ಚಿಸಿದೆ.


ಪ್ರಶಸ್ತಿ ಪುರಸ್ಕೃತ ಎಮ್.ಜಿ. ನಾಯ್ಕ ರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯ ಕುಮಾರ್, ಶಿಕ್ಷಕರ ಪ್ರತಿಭಾ ಪರಿಷತ್ತಿನ ರಾಜ್ಯ ಸಹಕಾರ ಸಮಿತಿಯ ಸದಸ್ಯ ಗೋಪಾಲ ನಾಯ್ಕ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಮಾಜಿ ಅಧ್ಯಕ್ಷ ಎಮ್.ಕೆ. ನಾಯ್ಕ ಕಡಕೇರಿ, ಶಿಕ್ಷಕರ ಪ್ರತಿಭಾ ಪರಿಷತ್ತಿನ ತಾಲೂಕು ಅಧ್ಯಕ್ಷೆ ರೀಟಾ ಡಿಸೋಜ, ಹಾಗೂ ನೂರಾರು ಶಿಕ್ಷಕರು,, ಎಸ್.ಡಿ.ಎಮ್.ಸಿ ಅಧ್ಯಕ್ಷ ನಾಗರಾಜ ಅಂಬಿಗ, ಸದಸ್ಯರು, ಪಾಲಕರು ಅಭಿನಂದಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *