ಬಿಲ್ಲವ/ಈಡಿಗ ಸಮುದಾಯಗಳ ಬೇಡಿಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ

ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು: ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿರುವ ಈಡಿಗ- ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ ಅವರು, ‘ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ’ ಎಂದು ಹೇಳಿದ್ದಾರೆ.

“ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ.” ಮುಖ್ಯಮಂತ್ರಿ @BSBommai pic.twitter.com/BmNEV2INVK — CM of Karnataka (@CMofKarnataka) February 20, 2023

ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪವರ್ಗ 2’ಎ’ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಇಲಾಖೆಯ ಅಧೀನನ ಕಾರ್ಯದರ್ಶಿ ಷಾಹಿನ್ ಪರ್ವಿನ್ ಆದೇಶದಲ್ಲಿ ತಿಳಿಸಿದ್ದಾರೆ. 

ರಾಜ್ಯದ ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬುದು ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು. ಸಮುದಾಯದ ಕನಸನ್ನು ನನಸು ಮಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @bsbommai ರವರಿಗೆ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಅರ್ಪಿಸುತ್ತೇನೆ. @BJP4Karnataka pic.twitter.com/QZRsGZ3mmH — Sunil Kumar Karkala (@karkalasunil) February 20, 2023

ಈ ಸಂಬಂಧ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ”ರಾಜ್ಯದ ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬುದು ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು. ಸಮುದಾಯದ ಕನಸನ್ನು ನನಸು ಮಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *