37 ಶಿವರಾಜ್‌ ಕುಮಾರ ಕೃತಜ್ಞತೆ

ನಟ ಶಿವರಾಜ್ ಕುಮಾರ್ ಚಿತ್ರರಂಗಕ್ಕೆ ಬಂದು 37 ವರ್ಷ: ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಹ್ಯಾಟ್ರಿಕ್ ಹೀರೋ

ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಬಣ್ಣಹಚ್ಚಿ ನಟಿಸಲು ಆರಂಭಿಸಿ ಇಂದಿಗೆ 37 ವರ್ಷವಾಗಿದೆ. ಸುದೀರ್ಘ ಪಯಣದಲ್ಲಿ 125 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

Actor Shivaraj Kumar

ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಬಣ್ಣಹಚ್ಚಿ ನಟಿಸಲು ಆರಂಭಿಸಿ ಇಂದಿಗೆ 37 ವರ್ಷವಾಗಿದೆ. ಸುದೀರ್ಘ ಪಯಣದಲ್ಲಿ 125 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ, ಕೋಟ್ಯಂತರ ಅಭಿಮಾನಿಗಳನ್ನು ಅವರು ಸಂಪಾದಿಸಿದ್ದಾರೆ. ಇಷ್ಟು ವರ್ಷಗಳ ಕಾಲ ತಮಗೆ ಪ್ರೀತಿ ತೋರಿಸಿದ ಅಭಿಮಾನಿಗಳು, ಕುಟುಂಬಸ್ಥರು, ಕೋಟಿ ಕೋಟಿ ಕನ್ನಡಿಗರಿಗೆ ಶಿವರಾಜ್​ಕುಮಾರ್ ಧನ್ಯವಾದ ಹೇಳಿದ್ದಾರೆ. 

ಶಿವರಾಜ್​ಕುಮಾರ್ ಮೊದಲು ಬಣ್ಣ ಹಚ್ಚಿದ ಸಿನಿಮಾ ‘ಆನಂದ್’. ಈ ಚಿತ್ರ ಸೆಟ್ಟೇರಿದ್ದು 1986, ಫೆ.19ರಂದು. ಶಿವಣ್ಣ ಅವರು ಮೊದಲ ಬಾರಿಗೆ ಕ್ಯಾಮೆರಾ ಎದುರಿಸಿದ ದಿನ. ಈ ಬಗ್ಗೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. 

‘ಕನ್ನಡ ಚಿತ್ರರಂಗಕ್ಕೆ ನಾನು ಪಾದಾರ್ಪಣೆ ಮಾಡಿ ಇಂದಿಗೆ 37 ವರ್ಷಗಳು. ಆನಂದ್ ಚಿತ್ರದ ಮೊದಲ ದೃಶ್ಯ ಈಗಲೂ ಕಣ್ಣಿಗೆ ಕಟ್ಟಿದಂತಿದೆ. ಆನಂದ್ ಇಂದ ವೇದವರೆಗೂ ನೀವು ಕೊಟ್ಟ ಪ್ರೀತಿ ಬೆಲೆಕಟ್ಟಲಾಗದ್ದು. ನನ್ನನ್ನು ನೀವು ಕೇವಲ ಒಬ್ಬ ನಟನಾಗಿ, ಸ್ಟಾರ್ ಆಗಿ ಮಾತ್ರವಲ್ಲದೆ ನಿಮ್ಮ ಮನೆಮಗನಾಗಿ ಬೆಳೆಸಿದ್ದೀರಿ. ದೇವರ ಸ್ವರೂಪವಾಗಿರುವ ಅಭಿಮಾನಿಗಳಿಗೆ, ಮಾಧ್ಯಮ ಮಿತ್ರರಿಗೆ, ಹಿರಿಯರಿಗೆ, ಕಿರಿಯರಿಗೆ, ಸಹದ್ಯೋಗಿಗಳಿಗೆ ಹಾಗು ನನ್ನ ಇಡೀ ಕುಟುಂಬಕ್ಕೆ ಅನಂತ ವಂದನೆಗಳು’ ಎಂದು ಶಿವಣ್ಣ ಬರೆದುಕೊಂಡಿದ್ದಾರೆ.

ಶಿವರಾಜ್​ಕುಮಾರ್ ಅವರ ಮೊದಲ ಸಿನಿಮಾ ‘ಆನಂದ್’ ಯಶಸ್ಸು ಕಂಡಿತು. ಈ ಚಿತ್ರದಿಂದ ಶಿವರಾಜ್​ಕುಮಾರ್ ವೃತ್ತಿಜೀವನಕ್ಕೆ ಭದ್ರಬುನಾದಿ ಸಿಕ್ಕಿತು. ಅವರ ನಟನೆಯ 125ನೇ ಚಿತ್ರ ‘ವೇದ’ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿ ಯಶಸ್ಸು ಕಂಡಿತು. ಈ ಚಿತ್ರವನ್ನು ಗೀತಾ ಪಿಕ್ಚರ್ಸ್ ಮೂಲಕ ನಿರ್ಮಾಣ ಮಾಡಲಾಯಿತು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *