ಬಾಡೂಟ ಸವಿದು ದೇವಾಲಯ ಪ್ರವೇಶಿಸಿದ್ರಾ ಸಿ.ಟಿ. ರವಿ: ಎಲ್ಲೆಡೆ ವ್ಯಾಪಕ ಚರ್ಚೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ನಾಗಬನ ಮತ್ತು ಹನುಮ ದೇಗುಲಕ್ಕೆ ಭೇಟಿ ನೀಡಿದ್ರಾ ಅನ್ನೋ ಪ್ರಶ್ನೆ  ಹರಿದಾಡುತ್ತಿದೆ.

ಕಾರವಾರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ನಾಗಬನ ಮತ್ತು ಹನುಮ ದೇಗುಲಕ್ಕೆ ಭೇಟಿ ನೀಡಿದ್ರಾ ಅನ್ನೋ ಪ್ರಶ್ನೆ  ಹರಿದಾಡುತ್ತಿದೆ.

ಫೆಬ್ರವರಿ 19 ರಂದು ಭಾನುವಾರ ಉತ್ತರ ಕನ್ನಡ  ಜಿಲ್ಲೆಗೆ ಸಿ.ಟಿ.ರವಿ ಆಗಮಿಸಿದ್ದರು. ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ಭಟ್ಕಳಕ್ಕೆ ಸಿ.ಟಿ.ರವಿ ಆಗಮಿಸಿದ್ದರು. ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್  ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಾಡೂಟ ಸವಿದು ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದರು.

ನಾಗಬನದ ಬಾಗಿಲು ಹಾಕಿದ್ದರಿಂದ ಗೇಟ್ ಮುಂಭಾಗದಲ್ಲಿ ದೇವರಿಗೆ ಸಿ.ಟಿ.ರವಿ ನಮಸ್ಕಾರ ಸಲ್ಲಿಸಿದ್ದರು. ನಂತರ ಗೇಟ್ ಮುಂಭಾಗದಲ್ಲಿಯೇ ಶಾಸಕ ಸುನಿಲ್ ನಾಯ್ಕ ಹಾಗೂ ಕಮಿಟಿ ಸದಸ್ಯರು ಸಿ.ಟಿ.ರವಿ ಅವರನ್ನು ಸನ್ಮಾನಿಸಿದ್ದರು.

ಈ ಹಿಂದೆ ಮಾಂಸ ಸೇವನೆ ಮಾಡಿ ದೇವಾಲಯದೊಳಗೆ ಪ್ರವೇಶ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾರಿ ವಿರೋಧವನ್ನು ಎದುರಿಸಿದ್ದರು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಶಾಸಕರೊಬ್ಬರ ಮನೆಯಲ್ಲಿ ಭರ್ಜರಿ ಬಾಡೂಟವನ್ನು ಸವಿದು ದೇವಾಲಯ ಪ್ರವೇಶ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹಿಂದೂ ಧರ್ಮದ ಬಗ್ಗೆ ಮಾತನಾಡುವ ರವಿ ಅವರು ಧರ್ಮದ ಆಚಾರ, ವಿಚಾರಗಳು ಹಾಗೂ ಸಂಪ್ರದಾಯವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ಉತ್ತರಕನ್ನಡ ಜಿಲ್ಲೆಯಾದ್ಯಂತ ಸಿ.ಟಿ. ರವಿ ಅವರ ಬಾಡೂಟ ಹಾಗೂ ದೇವಾಲಯ ಪ್ರವೇಶದ ಬಗ್ಗೆಯೇ ಚರ್ಚೆಯಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *