ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ.
ಇಂದು ವಿಧಾಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ವಿದಾಯ ಭಾಷಣ ಮಾಡಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ನಿರ್ದಿಷ್ಟಾವಧಿಗೆ ಮುಂದೂಡಿದರು.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಈ ಸದನದವನ್ನು ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಯಶಸ್ವಿಯಾಗಿ ನಡೆಸಿದ್ದಾರೆ. ನೀವು ಮುಂದಿನ ಬಾರಿ ಮಂತ್ರಿಯಾಗಿ ಇಲ್ಲಿ ಕೂರಬೇಕು. ಇಲ್ಲಿ ಮಹಿಳೆಯರು ಹೆಚ್ಚು ಆಯ್ಕೆ ಆಗಬೇಕು ಎಂದು ಹೇಳಿದರು.
ಇದೇ ವೇಳೆ ಶಿಕಾರಿಪುರದ ಜನರಿಗೆ ಧನ್ಯವಾದ ಹೇಳಿದ ಯಡಿಯೂರಪ್ಪ, ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಫೆಬ್ರವರಿ 27ಕ್ಕೆ ನನಗೆ 80 ವರ್ಷ ತುಂಬುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಹುಟ್ಟು ಹಬ್ಬಕ್ಕೆ ಬರಲಿದ್ದಾರೆ. ಅಂದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ ಎಂದರು.
ಇದೇ ವೇಳೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಸ್‌ವೈ, ದೇವೇಗೌಡರು ನಮಗೆ ಆದರ್ಶ. ಅವರನ್ನು ನೋಡಿ ಕಲಿಯುವಂತದ್ದು ತುಂಬಾ ಇದೆ. ಈ ವಯಸ್ಸಿನಲ್ಲೂ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡುತ್ತಾರೆ, ಚಿಂತನೆ ಮಾಡುತ್ತಾರೆ. ಅವರು ನಮಗೆ ಆದರ್ಶ ಎಂದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಯಶಸ್ವಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಎಟಿ ರಾಮಸ್ವಾಮಿ ಸೇರಿದಂತೆ ಹಲವರು ಉತ್ತಮ ಕೆಲಸ ಮಾಡಿದ್ದಾರೆ ಎಂದರು. (kpc)