40 ಪರ್ಸೆಂಟ್ ಕಮಿಷನ್ ಸರ್ಕಾರ ಕಿತ್ತೊಗೆಯಿರಿ

40 ಪರ್ಸೆಂಟ್ ಕಮಿಷನ್ ಸರ್ಕಾರ ಕಿತ್ತೊಗೆದು, ಎಎಪಿಗೆ ಒಂದು ಅವಕಾಶ ಕೊಡಿ: ಕೇಜ್ರಿವಾಲ್

ಕರ್ನಾಟಕದಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರ ಇದ್ದು, ಅದನ್ನು ಕಿತ್ತೊಗೆದು ಐದು ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಲು ಆಮ್ ಆದ್ಮಿ ಪಕ್ಷಕ್ಕೆ ಒಂದು ಅವಕಾಶ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು…

Delhi Chief Minister Arvind Kejriwal

ದಾವಣಗೆರೆ: ಕರ್ನಾಟಕದಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರ ಇದ್ದು, ಅದನ್ನು ಕಿತ್ತೊಗೆದು ಐದು ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಲು ಆಮ್ ಆದ್ಮಿ ಪಕ್ಷಕ್ಕೆ ಒಂದು ಅವಕಾಶ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಇಂದು ದಾವಣಗೆರೆಯಲ್ಲಿ ಆಮ್ ಆದ್ಮಿ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಕೇಜ್ರಿವಾಲ್, ಎಎಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತ ವಿದ್ಯುತ್, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವುದಾಗಿ ಭರವಸೆ ನೀಡಿದರು.

ದೆಹಲಿ ಮತ್ತು ಪಂಜಾಬ್ ನಲ್ಲಿ ನಾವೇನು ಮಾಡಿದ್ದೇವೆ ಎಂಬದು ಜನರಿಗೆ ಗೊತ್ತಿದೆ. ಪಂಜಾಬ್ ಮತ್ತು ದೆಹಲಿಯಲ್ಲಿ ಪ್ರಾಮಾಣಿಕ ಸರ್ಕಾರ ಕೊಟ್ಟಂತೆ ಇಲ್ಲಿಯೂ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುತ್ತೇವೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಡಬಲ್‌ ಎಂಜಿನ್‌ ಸರ್ಕಾರ ತರುತ್ತೇವೆ ಎಂದು ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದರು. ಜನ ಅದನ್ನು ನಂಬಿ ಅಧಿಕಾರವನ್ನೂ ನೀಡಿದರು. ಡಬಲ್ ಎಂಜಿನ್‌ ಸರ್ಕಾರ ಬಂದು ಇಲ್ಲಿ ಭ್ರಷ್ಟಾಚಾರವೇ ಡಬಲ್‌ ಆಯಿತು. 20 ಪರ್ಸೆಂಟ್ ಇದ್ದಿದ್ದು 40 ಪರ್ಸೆಂಟ್‌ ಆಯಿತು ಎಂದು ದೆಹಲಿ ಸಿಎಂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದೆಹಲಿಯಲ್ಲಿ ಸರ್ಕಾರಿ ಶಾಲೆಗಳನ್ನು ಅತ್ಯುತ್ತಮವಾಗಿ ರೂಪಿಸಿದ್ದೇವೆ. ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ಉಚಿತ ಸಮವಸ್ತರ ನೀಡಿದ್ದೇವೆ. ದೆಹಲಿ ಜನರಿಗೆ ಉತ್ತಮ ಆಸ್ಪತ್ರೆ ಸೌಲಭ್ಯ ಉಚಿತವಾಗಿ ಒದಗಿಸಿದ್ದೇವೆ. ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ, 200 ಯುನಿಟ್‌ ವಿದ್ಯುತ್‌ ಉಚಿತ ಹೀಗೆ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೇವೆ ಎಂದು ತಿಳಿಸಿದರು. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *