
ಸಿದ್ಧಾಪುರ ಬೇಡ್ಕಣಿಯ ಮಾರುತಿ ಪ್ರಸಾದಿತ ಯಕ್ಷಗಾನ ಕಲಾಸಂಘದ೨೫ ರ ಯಕ್ಷಸಂಬ್ರಮ ಮಾರ್ಚ ೫ ರ ರವಿವಾರ ಅಪರಾಹ್ನ ೩ ಗಂಟೆಗೆ ನಡೆಯಲಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ನಡೆಯುವ ಈ ಕಾರ್ಯಕ್ರಮವನ್ನು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಲಿದ್ದಾರೆ. ಉ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಅನೇಕ ಮಾಜಿ,ಹಾಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದ ಭಾಗವಾಗಿ ನಡೆಯಲಿರುವ ಸನ್ಮಾನದಲ್ಲಿ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ೨೫ ಜನರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ. ಸಂಜೆ ೭.೩೦ ರಿಂದ ಸಂಪೂರ್ಣ ಶ್ರೀ ರಾಮಾಶ್ವಮೇಧ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
