ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ

ಸಿದ್ದಾಪುರ
ತಾಲೂಕಿನ ಹಾರ್ಸಿಟ್ಟಾ ಗ್ರಾಪಂ ವ್ಯಾಪ್ತಿಯ ಬಾಳೇಗದ್ದೆಯ ಗಂಗಾಧರ ರಾಮ ನಾಯ್ಕ ಅವರ ಕೊಟ್ಟಿಗೆಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಕೊಟ್ಟಿಗೆಯಲ್ಲಿದ್ದ ಎಮ್ಮೆ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ನಡೆದಿದೆ.
ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಎಮ್ಮೆಗೆ ಭಾಗಶಃ ಸುಟ್ಟಿದ್ದು ಸ್ಥಳಕ್ಕೆ ಹಾರ್ಸಿಕಟ್ಟಾ ಪಶುವೈದ್ಯಾಧಿಕಾರಿ ಡಾ.ಶ್ರೇಯಸ್ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿದ್ದಾಪುರ:ತಾಲೂಕಿನ ನಾಣಿಕಟ್ಟಾದಲ್ಲಿ ಸಿದ್ಧಿವಿನಾಯಕ ಯಕ್ಷಮಿತ್ರ ಬಳಗ, ನಟರಾಜ ಎಂ.ಹೆಗಡೆ ಮತ್ತು ಗೆಳೆಯರ ಬಳಗ ಹಾಗೂ ಉಪೇಂದ್ರ ಪೈ ಸೇವಾ ಟ್ರಸ್ಟ್ ಶಿರಸಿ ಇವುಗಳ ಆಶ್ರಯದಲ್ಲಿ ನಾಣಿಕಟ್ಟಾ ಸಾಂಸ್ಕೃತಿಕ ಉತ್ಸವ, ಗೌರವ ಸನ್ಮಾನ ಹಾಗೂ ಯಕ್ಷಗಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ತ್ಯಾಗಲಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ಬಿ.ಹೆಗಡೆ ಮಾತನಾಡಿ ನಮ್ಮ ನಾಡಿನ ಕಲೆಗಳು ಶ್ರೇಷ್ಠವಾಗಿದೆ. ಅದರಲ್ಲಿಯೂ ಮುಖ್ಯವಾಗಿ ಯಕ್ಷಗಾನ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಕಲೆಯಾಗಿದ್ದಲ್ಲದೇ ಜೀವನಕ್ಕೆ ಅತ್ಯವಶ್ಯವಾಗಿದೆ . ಯಕ್ಷಗಾನ ಸಂಘಟಕರಿಗೆ, ಕಲಾವಿದರಿಗೆ ಪ್ರೋತ್ಸಾಹ ನೀಉವ ಅವಶ್ಯಕತೆ ಇದೆ ಎಂದು ಹೇಳಿದರು.


ಉದ್ಯಮಿ ಉಪೇಂದ್ರ ಪೈ ಶಿರಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿ.ವಿನಾಯಕ ಎಸ್.ಭಟ್ಟ ಮತ್ತೀಹಳ್ಳಿ, ಎ.ಜಿ.ನಾಯ್ಕ ಬರಣಿ, ತ್ಯಾಗಲಿ ಗ್ರಾಪಂ ಅಧ್ಯಕ್ಷ ಲಕ್ಷಿö್ಮನಾರಾಯಣ ಎಂ.ಹೆಗಡೆ ಹೂಡ್ಲಮನೆ, ನಾಣಿಕಟ್ಟಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ನರಹರಿ ಹೆಗಡೆ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗಣೇಶ ನಾಯ್ಕ, ಯಕ್ಷಮಿತ್ರಬಳಗದ ಹಿರಿಯರಾದ ಎಂ.ಎಂ.ಹೆಗಡೆ ಹಂಗಾರಖಂಡ, ಪ್ರಭಾಕರ ಹೆಗಡೆ ಸೂರನ್, ರವೀಂದ್ರ ಹೆಗಡೆ ಸೂರನ್, ಉಮೇಶ ಹೆಗಡೆ ಸೂರನ್ ಇತರರಿದ್ದರು.
ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ರನ್ನು ಸನ್ಮಾನಿಸಲಾಯಿತು.


ನಾಣಿಕಟ್ಟಾ ಸಾಂಸ್ಕೃತಿಕ ಉತ್ಸವದ ಅಂಗವಾಗಿ ಭರತನಾಟ್ಯ, ಮಕ್ಕಳಿಂದ ವಿವಿಧ ಮನರಂಜನಾ ಕಾರ್ಯಕ್ರಮ ನಂತರ ವೀರಾಂಜನೇಯ ಯಕ್ಷಮಿತ್ರಬಳಗ ಬಂಗಾರಮಕ್ಕಿ ಹಾಗೂ ಅತಿಥಿಕಲಾವಿದರಿಂದ ಭೀಷ್ಮವಿಜಯ ಯಕ್ಷಗಾನ ಪ್ರದರ್ಶನಗೊಂಡಿತು.
ಹಿಮ್ಮೇಳದಲ್ಲಿ ಶಂಕರ ಭಟ್ಟ ಬ್ರಹ್ಮೂರು, ಕು.ಶ್ರೀರಕ್ಷಾ ಹೆಗಡೆ ಸಿದ್ದಾಪುರ, ಶಂಕರ ಭಾಗವತ ಯಲ್ಲಾಪುರ, ವಿಘ್ನೇಶ್ವರ ಗೌಡ ಕೆಸರಕೊಪ್ಪ, ಪ್ರಸನ್ನ ಭಟ್ಟ ಹೆಗ್ಗಾರ ಸಹಕರಿಸಿದರು.
ಮುಮ್ಮೇಳದಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿ, ವಿದ್ಯಾಧರರಾವ್ ಜಲವಳ್ಳಿ, ಡಾ.ಪ್ರದೀಪ ಸಾಮಗ. ಅಶೋಕ ಭಟ್ಟ ಸಿದ್ದಾಪುರ, ಶ್ರೀಧರ ಭಟ್ಟ ಕಾಸರಕೋಡ,ಮಹಾಬಲೇಶ್ವರ ಗೌಡ, ಅವಿನಾಶ ಕೊಪ್ಪ, ರಾಮಚಂದ್ರ ಮುಗದೂರು, ಆನಂದ ಹೆಗಡೆ ಶೀಗೆಹಳ್ಳಿ, ಗಣೇಶ ಹೆಗಡೆ ಸೂರನ್ನ ವಿವಿಧ ಪಾತ್ರನಿರ್ವಹಿಸಿ ಮೆಚ್ಚುಗೆಗಳಿಸಿದರು.
ನಿರ್ಮಲಾ ಹೆಗಡೆ, ವಾಸುದೇವ ಎನ್ ನಾಯ್ಕ, ವಾಣಿ ಹೆಗಡೆ, ನಟರಾಜ ಎಂ.ಹೆಗಡೆ, ರಮೇಶ ಎನ್.ಬಾಳೇಕೈ, ರಮೇಶ ಟಿ.ನಾಯ್ಕ, ಶಂಕರನಾರಾಯಣ ಆದಿದ್ರಾವಿಡ,ಅಕ್ಷಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *