

ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ‘ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ’ ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ್ ಹೇಳಿದ್ದಾರೆ.

ಮಂಗಳೂರು: ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ‘ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ’ ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ್ ಹೇಳಿದ್ದಾರೆ.
ಹಳಿಯಾಳದಲ್ಲಿ ಯಾತ್ರೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಚಾಲನೆ ನೀಡಲಿದ್ದು, ರೋಡ್ ಶೋ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಯಾತ್ರೆಯ ಅಂಗವಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಮಾವೇಶಗಳು ನಡೆಯಲಿವೆ. ಕಾರವಾರದಲ್ಲಿ ನಡೆಯಲಿರುವ ಜಿಲ್ಲಾ ಮಹಿಳಾ ಸಮಾವೇಶದಲ್ಲಿ ಬಿಜೆಪಿ ನಾಯಕಿ ಹಾಗೂ ಸುಪ್ರೀಂ ಕೋರ್ಟ್ ವಕೀಲೆ ಮೀನಾಕ್ಷಿ ಲೇಖಿ ಭಾಗವಹಿಸಲಿದ್ದಾರೆ. ಯಲ್ಲಾಪುರದಲ್ಲಿಯೂ ಎಸ್’ಟಿ ರ್ಯಾಲಿ ನಡೆಯಲಿದೆ. ರೈತರ ಮತ್ತು ಪರಿಶಿಷ್ಟ ಜಾತಿಗಳ ಸಮಾವೇಶವನ್ನೂ ನಡೆಸಲಾಗುವುದು, ಇದಕ್ಕಾಗಿ ಸ್ಥಳದ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಯಾತ್ರೆಯು ಮಾರ್ಚ್ 21 ರಂದು ಮುಕ್ತಾಯಗೊಳ್ಳುತ್ತದೆ ಮತ್ತು ಅದೇ ದಿನ ಹಾನಗಲ್ ತಲುಪಲಿದೆ ಎಂದು ನಾಯಕ್ ಮಾಹಿತಿ ನೀಡಿದರು. (kpc)
