
ಸಿದ್ಧಾಪುರ ತಾಲೂಕಾ ಆಸ್ಫತ್ರೆಯಲ್ಲಿ ಅವ್ಯವಸ್ಥೆ ಮಿತಿಮೀರಿದ್ದು ಸೂಕ್ತ ಚಿಕಿತ್ಸೆ ಮಾಡಲು ತಾಲೂಕಾ ಬ್ಲಾಕ್ ಕಾಂಗ್ರೆಸ್ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಮಾಡಿದೆ.

ಈ ಬಗ್ಗೆ ಬರೆದ ಮನವಿಯನ್ನು ತಾಲೂಕಾ ಆಸ್ಫತ್ರೆಮೂಲಕ ನೀಡಿದ ತಾಲೂಕಾ ಬ್ಲಾಕ್ ಕಾಂಗ್ರೆಸ್ ಸದಸ್ಯರು. ಆಸ್ಫತ್ರೆಯಲ್ಲಿ ನಿಗದಿತ ಸಮಯದಲ್ಲಿ ವೈದ್ಯರು ಲಭ್ಯರಿರುವುದಿಲ್ಲ. ಪರ ಜಿಲ್ಲೆಗಳಿಗೆ ಸಾಗಹಾಕುವುದು, ಹೆರಿಗೆಗೆ ಲಂಚ ಪಡೆಯುವುದು ಸೇರಿದಂತೆ ಅನೇಕ ಅವ್ಯವಸ್ಥೆಗಳು ಮಿತಿಮೀರಿವೆ. ಈ ಅನಾನುಕೂಲತೆಗಳ ಜೊತೆಗೆ ರೋಗಿಗಳಿಗೆ ಅನಿವಾರ್ಯವಿರುವ ಕೆಲವು ಉಪಕರಣಗಳನ್ನೂ ಒದಗಿಸಬೇಕು. ಎನ್ನುವ ಬೇಡಿಕೆ ಇಟ್ಟಿರುವ ಅವರು ಈ ವ್ಯವಸ್ಥೆಗಳನ್ನು ಕಾಲಮಿತಿಯಲ್ಲಿ ಸರಿಪಡಿಸದಿದ್ದರೆ ಆಸ್ಫತ್ರೆಯ ಎದುರು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
