ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

Representative Image

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಶಿರಸಿ ತಾಲೂಕಿನ ಹಲ್ಕಾಡಿ, ಹೊಸಕೊಪ್ಪ, ಕೊಡಸೂರು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ. ಕಳೆದ ಚುನಾವಣೆಯ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದರೆ ನೀರಿನ ಸಮಸ್ಯೆ ನೀಗಿಸಿ ಇತರೆ ಸೌಕರ್ಯ ಕಲ್ಪಿಸುವುದಾಗಿ ರಾಜಕೀಯ ಪಕ್ಷಗಳು ಈ ಗ್ರಾಮಗಳ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. 

‘ಈ ಬಾರಿ ಅವರು ಮತ ಕೇಳಲು ಬರಲಿ, ನಾವು ಅವರಿಗೆ ಸರಿಯಾದ ಉತ್ತರ ನೀಡುತ್ತೇವೆ. ಪ್ರತಿ ಬಾರಿಯೂ ಪೊಳ್ಳು ಭರವಸೆ ನೀಡಿ ನಮ್ಮನ್ನು ಮೂರ್ಖರನ್ನಾಗಿಸುತ್ತಿದ್ದಾರೆ’ ಎಂದು ಗ್ರಾಮಸ್ಥ ಮಂಜುನಾಥ ನಾಯ್ಕ ಹೇಳಿದರು.

ಈ ಗ್ರಾಮಗಳು ಅರಣ್ಯ ಪ್ರದೇಶದಲ್ಲಿದ್ದು, ರಸ್ತೆ, ನೀರು, ಶಾಲೆ, ಶೌಚಾಲಯದಂತಹ ಸೌಕರ್ಯಗಳ ಕೊರತೆಯಿದೆ. ರಾಜಕಾರಣಿಗಳ ವರ್ತನೆಯಿಂದ ಅಸಮಾಧಾನಗೊಂಡ ಜನರು ತಮ್ಮ ಗ್ರಾಮಗಳಿಗೆ ಪ್ರವೇಶವನ್ನು ನಿಷೇಧಿಸಿದ್ದಾರೆ. ‘ರಾಜಕಾರಣಿಗಳಿಗೆ ಇಲ್ಲಿ ಸ್ವಾಗತವಿಲ್ಲ’, ‘ನಮಗೆ ರಸ್ತೆ ಕೊಡಿ ಆಮೇಲೆ ಮತ ಕೇಳಿ’ ಎಂಬ ಬ್ಯಾನರ್‌ಗಳನ್ನು ಹಾಕಿದ್ದಾರೆ.

ಜೊಯಿಡಾ ತಾಲೂಕಿನ ನಂದಿಗಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡು ಹಾಗೂ ಹಳಿಯಾಳ ಗ್ರಾಮ ಪಂಚಾಯಿತಿ ಇನ್ನೂ ಎರಡು ಗ್ರಾಮಗಳು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿವೆ. ಈ ಗ್ರಾಮಗಳಿಗೆ ರಸ್ತೆ, ಸಾರಿಗೆ, ಕುಡಿಯುವ ನೀರಿನ ಕೊರತೆ ಇದೆ.

‘ನಾಯಕರು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗದಿದ್ದರೆ, ಅವರು ಅಧಿಕಾರದಲ್ಲಿರಲು ಅನರ್ಹರು. ಈ ಬಾರಿ ನಮ್ಮ ಮತವನ್ನು ಚಲಾಯಿಸದಿರಲು ನಿರ್ಧರಿಸಿದ್ದೇವೆ ಎಂದು ಗ್ರಾಮಸ್ಥ ಸೂರಜ್ ದಬ್ಗಾರ್ ಹೇಳಿದರು.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *