ಬಿ.ಜೆ.ಪಿ.ಗೆ ಲಿಂಗಾಯತರ ವಿರೋಧ: ಕಾಂಗ್ರೆಸ್‌,ಜೆ.ಡಿ.ಎಸ್.‌ ಪರ ಸಹಾನುಭೂತಿ!

ಬಿಜೆಪಿ ಮೇಲೆ ನಿರಾಸೆ, ಕಾಂಗ್ರೆಸ್- ಜೆಡಿಎಸ್ ಹೊಸ ಭರವಸೆ: ಲಿಂಗಾಯತ ಸ್ವಾಮೀಜಿಗಳ ವರಸೆ; ಆತಂಕದಲ್ಲಿ ಕೇಸರಿ ಪಾಳಯ!

2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ.

Representational image

ಬೆಂಗಳೂರು: 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ.

ಬಿಜೆಪಿ ವಿರುದ್ಧ ಬಹಿರಂಗವಾಗಿ ಕೆಲಸ ಮಾಡುತ್ತಿರುವ ಜಾಗತಿಕ ಲಿಂಗಾಯತ ಚಳುವಳಿ, ಪಂಚಮಸಾಲಿ ಗುಂಪುಗಳು ಮತ್ತು ರಾಷ್ಟ್ರೀಯ ಬಸವ ದಳದ ಸದಸ್ಯರು ಈ ಬದಲಾವಣೆಗೆ ಕಾರಣರಾಗಿದ್ದಾರೆ, ಸಮುದಾಯದ ನಿಲುವನ್ನು ಸ್ಪಷ್ಟಪಡಿಸಿದ ಪಂಚಮಸಾಲಿ ಮಠಾಧೀಶ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ನಮ್ಮ ಕೋಪ ಕೇವಲ ಮೀಸಲಾತಿ ವಿಷಯದ ಮೇಲಿದೆ.

ಎರಡು ವರ್ಷ ಕಳೆದರೂ ಬಿಜೆಪಿ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ನಾವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ನಮ್ಮೊಂದಿಗೆ ಮಾತನಾಡಲು ಸರ್ಕಾರಕ್ಕೆ ಸಮಯವಿಲ್ಲ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬಂದು ನಮ್ಮನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪಂಚಮಸಾಲಿಗಳು ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಬಿಜೆಪಿಗೆ ಈ ಬಾರಿ ಲಿಂಗಾಯತ ಸಮುದಾಯ ಬೆಂಬಲ ನೀಡುವಲ್ಲಿ ದೊಡ್ಡ ತೊಡಕುಗಳಿವೆ ಎಂದು ಲಿಂಗಾಯತ ಚಳವಳಿಗಳೊಂದಿಗೆ ಗುರುತಿಸಿಕೊಂಡಿರುವ ಮಾಜಿ ಅಧಿಕಾರಿ ಎಸ್‌ಎಂ ಜಾಮದಾರ್ ಹೇಳಿದ್ದಾರೆ.

‘ಲಿಂಗಾಯತರು ಸಾಮಾನ್ಯವಾಗಿ ಸಮುದಾಯದ ಪರವಾಗಿ ನಿಲ್ಲುವವರನ್ನು ಬೆಂಬಲಿಸುತ್ತಾರೆ. ಆದರೆ ಈ ಬಾರಿ, ಯಡಿಯೂರಪ್ಪ ಅವರು ಸಿಎಂ ಆಗಿ ನಿರ್ಗಮಿಸಿದ ನಂತರ, ವಿಶೇಷವಾಗಿ ಅವರು ಕಣ್ಣೀರು ಸುರಿಸಿದ ನಂತರ ಅದು ತಣ್ಣಗಾದಂತಿದೆ ಎಂದು ವೀರಶೈವ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ತಿಳಿಸಿದ್ದಾರೆ.

ನಮ್ಮನ್ನು ವಿರೋಧಿಸುವವರು ಮೂಲತಃ ಕಾಂಗ್ರೆಸ್ ಪರ ಶಕ್ತಿಗಳಾಗಿದ್ದು, ಬಿಜೆಪಿಯಿಂದ ದೂರ ಸರಿಯುತ್ತಿಲ್ಲ. ಲಿಂಗಾಯತರು ಇತರರನ್ನು ನಂಬುವುದಿಲ್ಲವಾದ್ದರಿಂದ ಅವರು ನಮ್ಮನ್ನು ಬೆಂಬಲಿಸುವುದನ್ನು ಮುಂದುವರಿಸುತ್ತಾರೆ ಎಂದು ಬಿಜೆಪಿಯ ಮಾಜಿ ಎಂಎಲ್‌ಸಿ ಗೋ ಮಧುಸೂದನ್ ಅಭಿಪ್ರಾಯ ಪಟ್ಟಿದ್ದಾರೆ.

ಲಿಂಗಾಯತ ಸಮುದಾಯ ಬೆಂಬಲ ಕಡಿಮೆಯಾಗುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಪಂಚಮಸಾಲಿ ಉಪಪಂಗಡ ಸೇರಿದಂತೆ ಹಲವು ಸ್ವಯಂಸೇವಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅವರ ಮನ ಗೆಲ್ಲದಿದ್ದರೇ ಬಿಜೆಪಿ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂದು ರಾಜಕೀಯ ವಿಶ್ಲೇಷಕ ಬಿಎಸ್ ಮೂರ್ತಿ ವಿವರಿಸಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *