

ಮಾ.25 ರಂದು ಬೇಡ್ಕಣಿಯಲ್ಲಿ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವ
ಸಿದ್ದಾಪುರ : ಜಿಲ್ಲೆಯ ಪ್ರಸಿದ್ದ ಜಾತ್ರೆಯಲ್ಲಿ ಒಂದಾದ ಬೇಡ್ಕಣಿಯ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಮಾರ್ಚ್ 25 ರ ಶನಿವಾರದಂದು ವಿಜೃಂಭಣೆಯಿಂದ ನಡೆಸಲು ನಿಶ್ಚಯಿಸಲಾಗಿದೆ ಎಂದು ದೇವಾಲಯದ ಆಡಳಿತಮಂಡಳಿಯವರು ತಿಳಿಸಿದ್ದಾರೆ
ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಮಾ 23 ರಿಂದ ಹೋಮ, ಹವನ, ಜಪ, ನೈವೇದ್ಯ, ತೀರ್ಥ ಪ್ರಸಾದ ವಿತರಣೆ ನಡೆಯಲಿದೆ ಹಾಗೂ ಶನಿವಾರ ಪಲ್ಲಕ್ಕಿಉತ್ಸವ,ಹಣ್ಣುಕಾಯಿ,ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಮತ್ತು ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಶ್ರೀ ಶನೇಶ್ವರ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಈ ಎಲ್ಲ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

