ಕಾಂಗ್ರೆಸ್‌ ಎರಡನೇ ಪಟ್ಟಿ ….ಇನ್ನೂ ೩-೪ ದಿನ ಅಷ್ಟೇ ಬಾಕಿ

ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಹೇಳಿದ್ದಾರೆ.

DK Shivakumar

ಬೆಂಗಳೂರು:‌ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2ನೇ ಪಟ್ಟಿಯಲ್ಲಿ ಬಹುತೇಕ ಶೇ. 95 ರಷ್ಟು ಹಾಲಿ ಶಾಸಕರಿಗೇ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ ಸಂಧಾನ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ ಎಂದು ಹೇಳಿದರು.

ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡಿರುವ ವಿಚಾರವಾಗಿ ಮಾತನಾಡಿ, ಈ ಕ್ಷೇತ್ರದಲ್ಲಿ ಧ್ರುವನಾರಾಯಣ ಅವರು ಸ್ಪರ್ಧಿಸಬೇಕಿತ್ತು. ಆದರೆ, ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆಂದು ತಿಳಿಸಿದರು.

ರಾಜಾಜಿನಗರ ಕ್ಷೇತ್ರದಲ್ಲಿ ವಿರೋಧದ ನಡುವೆ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಿರುವ ಕುರಿತು ಮಾತನಾಡಿ, ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ಪರಿಷತ್ ಅಧಿಕಾರ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ. ತೀರ್ಥಹಳ್ಳಿ ಸೇರಿದಂತೆ ಪ್ರಮುಖ ಸಂಧಾನ ಕ್ಷೇತ್ರಗಳಲ್ಲಿ ಟಿಕೆಟ್ ಕುರಿತು ಎಲ್ಲವೂ ಸರಿ ಹೋಗಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಮಾತನಾಡಿ, ‘ಕ್ಷೇತ್ರ ಆಯ್ಕೆಯನ್ನು ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಪಕ್ಷ ಟಿಕೆಟ್ ನೀಡಿದೆ ಎಂದರು.

ಇನ್ನೂ ಕೋಲಾರ ಹಾಗೂ ಬಾದಾಮಿ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಬಹುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಈ ಪ್ರಶ್ನೆಯನ್ನು ಪಕ್ಷದ ಹೈಕಮಾಂಡ್ ಗೆ ಕೇಳಬೇಕು ಎಂದು ತಿಳಿಸಿದರು.

ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಹಾಗೂ ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಅನರ್ಹಗೊಳಿಸಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯೇ? ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡಲಾಗಿದೆ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *